Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:7 - ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ; ಹೇಗಂದರೆ - ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ: ಹೇಗೆಂದರೆ, ಅವರು ತಮ್ಮನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿ ಅನ್ಯದೇವತೆಗಳನ್ನು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ಪಾಪಗಳನ್ನು ಮಾಡಿದ್ದರಿಂದ ಇವೆಲ್ಲವೂ ಸಂಭವಿಸಿದವು. ಈಜಿಪ್ಟಿನ ರಾಜನಾದ ಫರೋಹನ ಆಳ್ವಿಕೆಯಿಂದ ಇಸ್ರೇಲರನ್ನು ತಪ್ಪಿಸಿ ಯೆಹೋವನು ಅವರನ್ನು ಈಜಿಪ್ಟ್ ದೇಶದಿಂದ ಹೊರತಂದಿದ್ದನು. ಆದರೆ ಇಸ್ರೇಲರು ಬೇರೆ ದೇವರುಗಳನ್ನು ಪೂಜಿಸಲು ಆರಂಭಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಸ್ರಾಯೇಲರನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಇದೆಲ್ಲವೂ ಆಯಿತು. ಅವರು ಬೇರೆ ದೇವರುಗಳನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:7
27 ತಿಳಿವುಗಳ ಹೋಲಿಕೆ  

ನೀವು ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವದು; ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ ಅಂದನು.


ಇಂಥಾ ಬೊಂಬೆಗಳು ಸೌತೆಯ ತೋಟದ ಬೆದರುಗಂಬದಂತಿವೆ, ಮಾತಾಡಲಾರವು; ಹೊತ್ತುಕೊಂಡುಹೋಗಬೇಕು, ನಡೆಯಲಾರವು. ಅವುಗಳಿಗೆ ಅಂಜಬೇಡಿರಿ, ಕೇಡುಮಾಡಲಾರವು, ಮೇಲುಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.


ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಯೆಹೋವನು ಇಸ್ರಾಯೇಲ್ಯರಿಗೆ ನೀವು ಅನ್ಯದೇವತೆಗಳನ್ನು ಆರಾಧಿಸಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಸೇವೆಮಾಡಲೂ ಯಜ್ಞವರ್ಪಿಸಲೂಬಾರದು.


ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಹದಿನಾರು ವರುಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದನು;


ತನ್ನ ತಂದೆಯು ಮಾಡಿದ ಪಾಪಕೃತ್ಯಗಳನ್ನು ಇವನೂ ಮಾಡಿದನು. ಇವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಇವನು ಸೇವಿಸಲಿಲ್ಲ.


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಯಥಾರ್ಥಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡಿಯಲಿಲ್ಲ.


ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ ಎಂಬದೇ ಅಂದನು.


ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ ಎಂದು ಹೇಳಿದನು.


ಅವರು ತಮ್ಮ ಪಿತೃಗಳ ದೇವರಿಗೆ ದ್ರೋಹಿಗಳಾಗಿ ಆತನು ತಮ್ಮ ಮುಂದೆಯೇ ಸಂಹರಿಸಿದ ಆ ದೇಶ ನಿವಾಸಿಗಳ ದೇವರುಗಳನ್ನು ಹಿಂಬಾಲಿಸಿದರು.


ಅವರ ಹೊಲಸುತನಕ್ಕೂ ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ಅವರಿಗೆ ವಿಮುಖನಾದೆನು.


ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದಕ್ಕೆ ಕಟ್ಟಿ ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.


ಐಗುಪ್ತ ದೇಶದ ಸೋನ್ ಸೀಮೆಯಲ್ಲಿ ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡಿಸಿದನು.


ಏಲಾ ಮರಗಳ ತೋಪುಗಳಲ್ಲಿಯೂ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು ಹೊಳೆ ಕೊರೆದ ಡೊಂಗರಗಳಲ್ಲಿಯೂ ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ ಸುಳ್ಳಿನ ಸಂತತಿಯೂ ಆಗಿದ್ದೀರಿ.


ನನ್ನ ಜನರು ತಮ್ಮ ಮರದ ತುಂಡನ್ನು ಪ್ರಶ್ನೆ ಕೇಳುತ್ತಾರೆ, ಅವರ ಕೋಲು ಅವರಿಗೆ ಅರುಹನ್ನು ಉಂಟುಮಾಡುತ್ತದೆ; ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.


ಪರ್ವತಾಗ್ರಗಳಲ್ಲಿ ಯಜ್ಞಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪಹಾಕುತ್ತಾರೆ; ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವದರಿಂದ ಅವುಗಳ ಕೆಳಗೆ ಇವುಗಳನ್ನು ನಡಿಸುತ್ತಾರೆ; ಹೀಗಿರಲು [ನನ್ನ ಜನರೇ,] ನಿಮ್ಮ ಕುಮಾರಿಯರು ಸೂಳೆಯರಾಗಿ ನಡೆಯುವದೂ, ನಿಮ್ಮ ವಧುಗಳು ವ್ಯಭಿಚಾರಮಾಡುವದೂ ಏನಾಶ್ಚರ್ಯ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು