Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:10 - ಕನ್ನಡ ಸತ್ಯವೇದವು J.V. (BSI)

10 ಮೂರು ವರುಷಗಳವರೆಗೂ ಅದಕ್ಕೆ ಮುತ್ತಿಗೆಹಾಕಿ ಅದು ತನಗೆ ಇಸ್ರಾಯೇಲ್ಯರ ಅರಸನಾದ ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅಂದರೆ ಹಿಜ್ಕೀಯನ ಆಳಿಕೆಯ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೂರು ವರ್ಷಗಳ ತರುವಾಯ, ಇಸ್ರಾಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದ್ದನು. ಅದು ಅವನಿಗೆ ಇಸ್ರಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಸ್ವಾಧೀನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೂರು ವರ್ಷಗಳ ಕೊನೆಯಲ್ಲಿ ಶಲ್ಮನೆಸರನು ಸಮಾರ್ಯವನ್ನು ವಶಪಡಿಸಿಕೊಂಡನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ವಶಪಡಿಸಿಕೊಂಡನು. (ಹೋಶೇಯನು ಇಸ್ರೇಲಿನ ರಾಜನಾಗಿ ಆಳುತ್ತಿದ್ದ ಒಂಭತ್ತನೆಯ ವರ್ಷದಲ್ಲಿ ಇದು ಸಂಭವಿಸಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೂರು ವರ್ಷದ ತರುವಾಯ ಸಮಾರ್ಯವನ್ನು ಅಸ್ಸೀರಿಯದವರು ಸ್ವಾಧೀನಮಾಡಿಕೊಂಡರು. ಇಸ್ರಾಯೇಲಿನ ಅರಸನಾದ ಹೋಶೇಯನ ಒಂಬತ್ತನೆಯ ವರ್ಷವಾದ, ಹಿಜ್ಕೀಯನ ಆರನೆಯ ವರ್ಷದಲ್ಲಿ ಸಮಾರ್ಯವು ಸ್ವಾಧೀನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:10
11 ತಿಳಿವುಗಳ ಹೋಲಿಕೆ  

ಆದರೆ [ಅಷ್ಟರೊಳಗೆ] ಈ ದೇಶವು ತನ್ನ ನಿವಾಸಿಗಳ ನಿವಿುತ್ತ, ಅವರ ದುಷ್ಕೃತ್ಯಗಳಿಗೆ ಫಲವಾಗಿ ಹಾಳುಬಿದ್ದಿರುವದು.


ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.


ಹೀಗಿರಲು ಸೆರೆಗೆ ಒಯ್ಯಲ್ಪಡುವವರ ಮುಂದುಗಡೆ ಅವರು ಸೆರೆಗೆ ಹೋಗುವರು; ಒರಗಿಕೊಳ್ಳುವವರ ಹರ್ಷಧ್ವನಿಯು ನಿಂತುಹೋಗುವದು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಶತ್ರುವು ನಿನ್ನ ದೇಶವನ್ನು ಮುತ್ತಿಕೊಳ್ಳುವನು, ನಿನ್ನ ಶಕ್ತಿಯನ್ನು ಕುಂದಿಸಿಬಿಡುವನು, ನಿನ್ನ ಅರಮನೆಗಳು ಸೂರೆಯಾಗುವವು.


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ ತನ್ನ ದೋಷಫಲವನ್ನು ಅನುಭವಿಸಲೇಬೇಕು; ಅದರ ಜನರು ಖಡ್ಗಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.


ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.


ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಕರ್ಕೆಮೀಷಿನ ಗತಿಯು ಕಲ್ನೋವಿಗೂ ಆಯಿತಲ್ಲವೆ, ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಷ್ಟೆ; ದಮಸ್ಕದ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು