2 ಅರಸುಗಳು 18:12 - ಕನ್ನಡ ಸತ್ಯವೇದವು J.V. (BSI)12 ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆಹೋದದ್ದೂ ಆತನ ನಿಬಂಧನೆಯನ್ನು ಉಲ್ಲಂಘಿಸಿದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾಗಿ ನಡೆದದ್ದೂ ಇದಕ್ಕೆ ಕಾರಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇಸ್ರಯೇಲರು ತಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದದ್ದೂ ಅವರ ನಿಬಂಧನೆಯನ್ನು ಉಲ್ಲಂಘಿಸಿದ್ದೂ ಅವರ ದಾಸ ಮೋಶೆಯ ಆಜ್ಞೆಗಳಿಗೆ ಅವಿಧೇಯರಾಗಿ ನಡೆದದ್ದೂ ಇದಕ್ಕೆ ಕಾರಣಗಳಾಗಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇಸ್ರೇಲರು ತಮ್ಮ ದೇವರಾದ ಯೆಹೋವನಿಗೆ ಅವಿಧೇಯರಾದದ್ದೂ ಆತನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾದದ್ದೂ ಇದಕ್ಕೆ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ ಅವರು ತಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ಅವರ ಒಡಂಬಡಿಕೆಯನ್ನೂ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಸಮಸ್ತವನ್ನೂ ಮೀರಿದರು. ಅವರು ದೇವರ ಆಜ್ಞೆಗಳಿಗೆ ಕಿವಿಗೊಡಲಿಲ್ಲ, ಅವುಗಳಂತೆ ನಡೆಯಲಿಲ್ಲ. ಅಧ್ಯಾಯವನ್ನು ನೋಡಿ |