Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:23 - ಕನ್ನಡ ಸತ್ಯವೇದವು J.V. (BSI)

23 ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಪಂಥಹಾಕುವದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ; ನೀನು ಎಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಸವಾಲು ಮಾಡಿನೋಡು. ಆಗ ಕುದುರೆ ಸವಾರರನ್ನು ಬಳಸಲು ನಿನಗೆ ಸಾಮರ್ಥ್ಯವಿದ್ದರೆ ಆತನು ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದುದರಿಂದ ಬಾ, ಬಂದು ನನ್ನ ಒಡೆಯರಾದ ಅಸ್ಸೀರಿಯದ ಅರಸನೊಂದಿಗೆ ಒಂದು ಒಪ್ಪಂದ ಮಾಡಿಕೊ. ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುವನು; ಅವುಗಳ ಮೇಲೆ ಕೂರಿಸುವಷ್ಟು ಮಂದಿ ಸವಾರರು ನಿನಗಿದ್ದಾರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ‘ಈಗ ನಮ್ಮ ಒಡೆಯನಾದ ಅಶ್ಶೂರದ ರಾಜನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊ. ನಿನ್ನಲ್ಲಿ ಸವಾರಿಮಾಡಬಲ್ಲ ಸವಾರರು ಇದ್ದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆಂದು ನಾನು ಪ್ರಮಾಣ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ ‘ಹಾಗಾದರೆ ಈಗ ನೀನು ಅಸ್ಸೀರಿಯದ ಅರಸನಾದ ನನ್ನ ಯಜಮಾನನೊಂದಿಗೆ ಒಪ್ಪಂದ ಮಾಡಿಕೋ, ಆಗ ನಿನಗೆ ಎರಡು ಸಾವಿರ ಕುದುರೆಸವಾರರನ್ನು ಬಳಸಲು ಸಾಮರ್ಥ್ಯವಿದ್ದರೆ ನಾನು ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:23
10 ತಿಳಿವುಗಳ ಹೋಲಿಕೆ  

ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ ಎಂದು ಆಜ್ಞಾಪಿಸಿದನು.


ದೂತರು ಬಂದು ಈ ಮಾತುಗಳನ್ನು ಬೆನ್ಹದದನಿಗೆ ತಿಳಿಸಿದಾಗ ಅವನು ಅಹಾಬನಿಗೆ - ಸಮಾರ್ಯಪಟ್ಟಣದ ನಾಶನದಿಂದುಂಟಾಗುವ ಧೂಳು ಲೆಕ್ಕವಿಲ್ಲದ ನನ್ನ ಸೈನಿಕರ ಹಿಡಿತುಂಬವಷ್ಟಿದ್ದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದನು.


ಇಲ್ಲಿ ಬಾ; ನಿನ್ನ ಮಾಂಸವನ್ನು ಮೃಗಪಕ್ಷಿಗಳಿಗೆ ಹಂಚಿಕೊಡುತ್ತೇನೆ ಅಂದನು.


ಫಿಲಿಷ್ಟಿಯನು ಕೆಂಬಣ್ಣದವನೂ ಸುಂದರನೂ ಯೌವನಸ್ಥನೂ ಆದ ದಾವೀದನನ್ನು ನೋಡಿ ತಿರಸ್ಕಾರದಿಂದ ಅವನಿಗೆ -


ಒಂದು ವೇಳೆ ನೀವು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಯೆರೂಸಲೇವಿುನ ಯಜ್ಞವೇದಿಯ ಮುಂದೆಯೇ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!


ಇದೂ ನಿನಗೆ ಅಸಾಧ್ಯವಾಗುವದಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವದು ಹೇಗೆ? ರಥಾಶ್ವಬಲಗಳ ವಿಷಯವಾಗಿ ಐಗುಪ್ತ್ಯರನ್ನು ನಂಬಿರುತ್ತೀಯೆಂದು ಕಾಣುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು