Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:25 - ಕನ್ನಡ ಸತ್ಯವೇದವು J.V. (BSI)

25 ಈ ದೇಶವನ್ನು ಹಾಳುಮಾಡುವದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಅನ್ನುತ್ತಾನೆ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಈ ದೇಶಕ್ಕೆ ಬಂದು, ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದ್ದಾನೆ’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಈ ನಾಡನ್ನು, ಹಾಳುಮಾಡುವುದಕ್ಕೆ ಸರ್ವೇಶ್ವರಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರಸ್ವಾಮಿಯೇ ನನಗೆ ಆಜ್ಞೆ ಮಾಡಿದ್ದಾರೆ, ಎಂಬ ಈ ಮಾತುಗಳು ಅರಸನವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ‘ನಾನು ಯೆಹೋವನ ಚಿತ್ತವಿಲ್ಲದೆ ಜೆರುಸಲೇಮನ್ನು ನಾಶಗೊಳಿಸಲು ಬಂದೆನೆಂದು ನೆನಸುತ್ತೀಯೋ? “ಈ ದೇಶದ ವಿರುದ್ಧವಾಗಿ ನುಗ್ಗಿ ನಾಶಗೊಳಿಸು” ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು”’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಈ ಸ್ಥಳವನ್ನು ನಾಶಮಾಡುವುದಕ್ಕೆ ಯೆಹೋವ ದೇವರ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಯೆಹೋವ ದೇವರೇ ನನಗೆ ಹೇಳಿದರು,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:25
10 ತಿಳಿವುಗಳ ಹೋಲಿಕೆ  

ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ; ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.


ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ?


ಯೋಷೀಯನು ಅವನಿಗೆ ವಿರೋಧವಾಗಿ ಹೊರಡಲು ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ - ಯೆಹೂದದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟದ್ದು ನಿನಗೆ ವಿರೋಧವಾಗಿ ಅಲ್ಲ, ನನ್ನ ಶತ್ರುವಂಶಕ್ಕೆ ವಿರೋಧವಾಗಿಯೇ. ನನ್ನನ್ನು ಮುಂದರಿಸಬೇಕೆಂದು ದೇವರ ಅಪ್ಪಣೆಯಾಗಿದೆ. ನನ್ನೊಂದಿಗಿರುವ ದೇವರಿಗೆ ವಿರೋಧವಾಗಿ ಕೈಯೆತ್ತುವದನ್ನು ಬಿಡು. ಇಲ್ಲವಾದರೆ ಆತನು ನಿನ್ನನ್ನು ನಾಶಮಾಡುವನು ಎಂದು ಹೇಳಿಸಿದನು.


ಆಗ ಮುದುಕನು - ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ ಎಂದು ಹೇಳಿದನು; ಆದರೆ ಈ ಮಾತು ಸುಳ್ಳು.


ಇದೂ ನಿನಗೆ ಅಸಾಧ್ಯವಾಗುವದಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವದು ಹೇಗೆ? ರಥಾಶ್ವಬಲಗಳ ವಿಷಯವಾಗಿ ಐಗುಪ್ತ್ಯರನ್ನು ನಂಬಿರುತ್ತೀಯೆಂದು ಕಾಣುತ್ತದೆ.


ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ - ನೀನು ಮಾತಾಡುವದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತಾಡಬೇಡ ಎಂದು ಹೇಳಿದರು.


ಯೆರೂಸಲೇಮನ್ನು ನಿರಪರಾಧರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷವಿುಸದೆ ಹೋದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು