Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:26 - ಕನ್ನಡ ಸತ್ಯವೇದವು J.V. (BSI)

26 ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ - ನೀನು ಮಾತಾಡುವದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತಾಡಬೇಡ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವ ಯೆಹೂದ್ಯರಿಗೂ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು, ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ರಬ್ಷಾಕೆಗೆ, “ದಯವಿಟ್ಟು ನಿಮ್ಮ ಸೇವಕರಾದ ನಮ್ಮೊಡನೆ ಅರಾಮಾಯಿಕ್ ಭಾಷೆಯಲ್ಲಿ ಮಾತನಾಡಿ. ಅದು ನಮಗೆ ಅರ್ಥವಾಗುತ್ತದೆ. ಆದರೆ ಹಿಬ್ರೂ ಭಾಷೆಯಲ್ಲಿ ಮಾತನಾಡಬೇಡಿ. ಅದು ಪೌಳಿಗೋಡೆಯ ಮೇಲಿರುವವರಿಗೂ ಅರ್ಥವಾಗುತ್ತದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಂತರ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬುವರು ಸೇನಾಧಿಪತಿಗೆ, “ದಯವಿಟ್ಟು ನಮ್ಮೊಂದಿಗೆ ಅರಾಮ್ಯರ ಭಾಷೆಯಲ್ಲಿ ಮಾತನಾಡು. ನಾವು ಆ ಭಾಷೆಯನ್ನು ಅರ್ಥಮಾಡಿಕೊಳ್ಳುತ್ತೇವೆ. ಗೋಡೆಯ ಮೇಲಿರುವ ಜನರಿಗೆ ನಮ್ಮ ಮಾತುಗಳು ಕೇಳುವುದರಿಂದ ಯೆಹೂದದ ಭಾಷೆಯಲ್ಲಿ ನಮ್ಮೊಂದಿಗೆ ಮಾತನಾಡಬೇಡ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:26
8 ತಿಳಿವುಗಳ ಹೋಲಿಕೆ  

ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ವಿುತ್ರದಾತ, ಟಾಬೆಯೇಲ್ ಈ ಮೊದಲಾದವರು ಪಾರಸಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಅರಾಮ್ಯ ಭಾಷೆಯಲ್ಲಿಯೂ ಇತ್ತು.


ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ - ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು ಎಂದು ಅರಿಕೆಮಾಡಿದರು.


ಆಗ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಬಂದರು.


ಈ ದೇಶವನ್ನು ಹಾಳುಮಾಡುವದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಅನ್ನುತ್ತಾನೆ ಎಂದನು.


ಅದಕ್ಕೆ ರಬ್ಷಾಕೆಯು - ನನ್ನ ಯಜಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಒಡೆಯನ ಸಂಗಡವಾಗಲಿ ಮಾತಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕೂತಿರುವ ಜನರ ಸಂಗಡ ಮಾತಾಡುವದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವದು ಎಂದು ಉತ್ತರಕೊಟ್ಟು ಎದ್ದು


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ - ನಡೆ, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು