Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:29 - ಕನ್ನಡ ಸತ್ಯವೇದವು J.V. (BSI)

29 ಅವನು ನಿಮಗೆ - ಹಿಜ್ಕೀಯನಿಂದ ಮೋಸಹೋಗಬೇಡಿರಿ. ಅವನು ನಿಮ್ಮನ್ನು ನನ್ನ ಕೈಯಿಂದ ಬಿಡಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅರಸನು ನಿಮಗೆ, ‘ಹಿಜ್ಕೀಯನಿಂದ ಮೋಸಹೋಗಬೇಡಿರಿ, ಅವನು ನಿಮ್ಮನ್ನು ನನ್ನ ಕೈಯಿಂದ ಬಿಡಿಸಲಾರನು’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿ; ನಿಮ್ಮನ್ನು ಬಿಡಿಸಲು ಅವನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ‘ನಿಮ್ಮನ್ನು ಮೂರ್ಖರನ್ನಾಗಿಸಲು ಹಿಜ್ಕೀಯನಿಗೆ ಅವಕಾಶ ಕೊಡಬೇಡಿ! ನನ್ನ ಶಕ್ತಿಯಿಂದ ಅವನು ನಿಮ್ಮನ್ನು ರಕ್ಷಿಸಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅರಸನು ಹೇಳುವುದೇನೆಂದರೆ: ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿರಿ. ಏಕೆಂದರೆ ಅವನು ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ಶಕ್ತನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:29
10 ತಿಳಿವುಗಳ ಹೋಲಿಕೆ  

ನೀವು ಹಿಜ್ಕೀಯನಿಂದ ಮರುಳಾಗಿ ಈ ಪ್ರಕಾರ ಮೋಸಹೋಗಬೇಡಿರಿ. ಅವನನ್ನು ನಂಬಲೂಬೇಡಿರಿ. ಯಾವ ರಾಜ್ಯ ಜನಾಂಗಗಳ ದೇವತೆಯಾದರೂ ತನ್ನ ಪ್ರಜೆಯನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ನಿಮ್ಮ ದೇವರಂಥವನು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ ಎಂದು ಹೇಳಿಸಿದನು.


ಅವನು ತೆಗೆದುಬಿಡಲ್ಪಟ್ಟ ಕೂಡಲೆ ಆ ಅಧರ್ಮಸ್ವರೂಪನು ಕಾಣಬರುವನು; ಅವನನ್ನು ಯೇಸು ಕರ್ತನು ತನ್ನ ಬಾಯ ಉಸುರಿನಿಂದ ಕೊಲ್ಲುವನು, ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ಸಂಹರಿಸುವನು.


ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ - ನೀನು ನಿತ್ಯವೂ ಭಜಿಸುವ ದೇವರು ನಿನ್ನನ್ನುದ್ಧರಿಸಲಿ ಎಂದು ಹರಸಿದನು.


ಹಿಜ್ಕೀಯನು - ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವದಕ್ಕೆ ಪ್ರಯತ್ನಿಸುತ್ತಿರುವದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವದಕ್ಕೇ ಅಲ್ಲವೋ?


ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ - ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ;


ಹಿಜ್ಕೀಯನು ನಿಮಗೆ - ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೂ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂಬದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು