Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:31 - ಕನ್ನಡ ಸತ್ಯವೇದವು J.V. (BSI)

31 ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹಿಜ್ಕೀಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, “ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿ ಆಗ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಸ್ಸೀರಿಯದ ಅರಸನಾದ ನನ್ನ ಮಾತನ್ನು ಕೇಳಿ; ನನ್ನೊಡನೆ ಒಪ್ಪಂದಮಾಡಿಕೊಂಡು ನನ್ನ ಆಶ್ರಯವನ್ನು ಸೇರಿರಿ, ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗು ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನೇ ಕುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಎಂದು ಹೇಳಿದನು. ಅಶ್ಶೂರದ ರಾಜ ಹೀಗೆ ಹೇಳುತ್ತಾನೆ: “‘ನನ್ನೊಂದಿಗೆ ಶಾಂತಿಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿರಿ. ನಂತರ ಪ್ರತಿಯೊಬ್ಬರೂ ತನ್ನ ಸ್ವಂತ ದ್ರಾಕ್ಷಿಯನ್ನು ತಿನ್ನಬಹುದು; ತನ್ನ ಸ್ವಂತ ಅಂಜೂರವನ್ನು ತಿನ್ನಬಹುದು; ತನ್ನ ಸ್ವಂತ ಬಾವಿಯಿಂದ ನೀರನ್ನು ಕುಡಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ: ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:31
10 ತಿಳಿವುಗಳ ಹೋಲಿಕೆ  

ಸೊಲೊಮೋನನ ಆಳಿಕೆಯಲ್ಲೆಲ್ಲಾ ದಾನ್‍ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲ್ಯರೂ ಯೆಹೂದ್ಯರೂ ತಮ್ಮತಮ್ಮ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನೀವೆಲ್ಲರು ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿಗೆ ಕರೆಯುವಿರಿ.


ಇಸ್ರಾಯೇಲ್ ಯೆಹೂದ್ಯರು ಸಮುದ್ರತೀರದ ಉಸುಬಿನಷ್ಟು ಅಸಂಖ್ಯರಾಗಿದ್ದರು; ಅವರು ಅನ್ನಪಾನಗಳಲ್ಲಿ ತೃಪ್ತರಾಗಿ ಸಂತೋಷದಿಂದಿದ್ದರು.


ಕಾಣಿಕೆಯು ಅನುಕೂಲತೆಗೂ ಶ್ರೀಮಂತರ ಸಾನ್ನಿಧ್ಯಪ್ರವೇಶಕ್ಕೂ ಸಾಧನ.


ದೇವರು ನನಗೆ ಕೃಪೆಯನ್ನು ಮಾಡಿದ್ದರಿಂದ ನನಗೆ ಸಮೃದ್ಧಿಯುಂಟು; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು ಎಂದು ಹೇಳಿ ಏಸಾವನನ್ನು ಬಲವಂತಮಾಡಿದ್ದರಿಂದ ಅವನು ಆ ಕಾಣಿಕೆಯನ್ನು ತೆಗೆದುಕೊಂಡನು.


ಇದೇ ರೀತಿಯಾಗಿ ಮಾತಾಡಿ - ನಿಮ್ಮ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಾನೆ ಅನ್ನಿರಿ ಎಂದು ಅಪ್ಪಣೆಕೊಟ್ಟನು. ಯಾಕೋಬನು ತನ್ನೊಳಗೆ - ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ಅವನ ಸನ್ನಿಧಿಗೆ ಸೇರುವೆನು; ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು ಅಂದುಕೊಂಡನು.


ಹಿಜ್ಕೀಯನು ನಿಮಗೆ - ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೂ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂಬದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ.


ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಯಜಮಾನನ ಮಾತಿಗೆ ಕಾಯುವವನು ಮಾನವನ್ನನುಭವಿಸುವನು.


ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರಿಗೆ ಕಳುಹಿಸುತ್ತಾರೆ; ಅವರು ಕೊಳಗಳಿಗೆ ಹೋದಾಗ ನೀರು ಕಾಣುವದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ; ಆಶೆಗೆಟ್ಟು ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.


ಯೆಹೋವನು ನನ್ನ ತಂದೆಯಾದ ದಾವೀದನಿಗೆ - ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು