Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:32 - ಕನ್ನಡ ಸತ್ಯವೇದವು J.V. (BSI)

32 ಸ್ವಲ್ಪ ಕಾಲವಾದನಂತರ ನಾನು ಬಂದು ನಿಮ್ಮನ್ನು ಧಾನ್ಯ ದ್ರಾಕ್ಷಾರಸ ಆಹಾರ ದ್ರಾಕ್ಷೇತೋಟ ಎಣ್ಣೇಮರ ಜೇನುತುಪ್ಪ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರಕೊಂಡುಹೋಗುವೆನು; ನೀವು ಸಾಯುವದಿಲ್ಲ, ಬದುಕುವಿರಿ. ಯೆಹೋವನು ನಮ್ಮನ್ನು ರಕ್ಷಿಸುವನು ಎಂದು ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸ್ವಲ್ಪಕಾಲವಾದ ನಂತರ ನಾನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವೆನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೀತೋಟ, ಎಣ್ಣೇಮರ, ಜೇನುತುಪ್ಪ ಸಮೃದ್ಧಿಯಾಗಿರುವುವು. ನಿಮ್ಮ ನಾಡಿಗೆ ಸರಿಸಮಾನವಾಗಿರುವುವು; ನೀವು ಸಾಯುವುದಿಲ್ಲ, ಬದುಕುವಿರಿ; ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಾನು ಬಂದು, ನಿಮ್ಮನ್ನು ಈ ದೇಶಕ್ಕೆ ಸಮಾನವಾದ ಬೇರೊಂದು ದೇಶಕ್ಕೆ ಕರೆದೊಯ್ಯುವವರೆಗೆ ನೀವು ಹೀಗೆ ಮಾಡಬಹುದು. ಆ ದೇಶವು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಆಲೀವ್ ಮರ ಮತ್ತು ಜೇನುತುಪ್ಪ ಮುಂತಾದವುಗಳಿಂದ ಸಮೃದ್ಧಿಯಾಗಿದೆ. ನೀವು ಅಲ್ಲಿ ಸಾಯದೆ ಜೀವಿಸಬಹುದು. ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಅವನು ನಿಮ್ಮ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾನೆ. “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಅವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸ್ವಲ್ಪ ಕಾಲವಾದ ನಂತರ ನಾನು ಬಂದು, ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಎಣ್ಣೆಮರಗಳು, ಜೇನು ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ಜೀವವನ್ನು ಆಯ್ದುಕೊಳ್ಳಿರಿ, ಮರಣವನ್ನಲ್ಲ. “ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸಿ ತಪ್ಪು ಮಾರ್ಗದಲ್ಲಿ ನಡೆಸುವಾಗ, ಅವನ ಮಾತನ್ನು ಕೇಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:32
16 ತಿಳಿವುಗಳ ಹೋಲಿಕೆ  

ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.


ಆರನೆಯ ವರುಷದಲ್ಲಿ ಸ್ವಾಧೀನವಾಗಲು ಇಸ್ರಾಯೇಲ್ಯರನ್ನು ಸೆರೆಹಿಡಿದು ಹಲಹು, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ, ಮೇದ್ಯರ ಪಟ್ಟಣಗಳು ಇವುಗಳಿಗೆ ಕಳುಹಿಸಿದನು.


ದುರ್ಮಾರ್ಗದಲ್ಲಿ ನಡೆಯುವದನ್ನು ಬಿಡಲಿಲ್ಲವಾದದರಿಂದ ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಅದು ಹಾಲೂ ಜೇನೂ ಹರಿಯುವ ದೇಶ; ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಅದರಲ್ಲಿ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು;


ಅವನು ತನ್ನ ವಾಹನಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು, ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಬಟ್ಟೆಗಳನ್ನು ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು:


ಅವರ ಮುಖಾಂತರವಾಗಿ ಅವನಿಗೆ - ನೀನು ನಂಬುವ ದೇವರು - ನಾನು ಯೆರೂಸಲೇಮನ್ನು ಅಶ್ಶೂರದ ಅರಸನ ಕೈಗೆ ಒಪ್ಪಿಸುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.


ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿ; ನೀನು ನನ್ನ ಗೌರವಕ್ಕೆ ಆಧಾರನೂ ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.


ನಾನು ಭಜನೋತ್ಸವದಲ್ಲಿ ಸೇರಿ ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ ಸ್ತೋತ್ರಪದಗಳನ್ನು ಹಾಡುತ್ತಾ ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ಸ್ವಲ್ಪ ಕಾಲವಾದನಂತರ ನಾನು ಬಂದು ನಿಮ್ಮನ್ನು ಧಾನ್ಯ ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು