Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:35 - ಕನ್ನಡ ಸತ್ಯವೇದವು J.V. (BSI)

35 ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಆಗದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಕೈಯಿಂದ ಬಿಡಿಸಲಾಗದೆ ಹೋದಮೇಲೆ ಜೆರುಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಸರ್ವೇಶ್ವರನಿಗೆ ಸಾಧ್ಯವೋ?”, ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಬೇರೆ ಜನಾಂಗಗಳ ದೇವತೆಗಳು ಯಾವುದಾದರೂ ತಮ್ಮ ದೇಶವನ್ನು ನನ್ನಿಂದ ರಕ್ಷಿಸುತ್ತವೆಯೇ? ಇಲ್ಲ! ಜೆರುಸಲೇಮನ್ನು ಯೆಹೋವನು ನನ್ನಿಂದ ರಕ್ಷಿಸುತ್ತಾನೆಯೇ ಇಲ್ಲ!’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:35
13 ತಿಳಿವುಗಳ ಹೋಲಿಕೆ  

ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಆಡಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಎತ್ತಿಕೊಂಡವನನ್ನು ಕೋಲು ಬೀಸಿದಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ನೀವು ಹಿಜ್ಕೀಯನಿಂದ ಮರುಳಾಗಿ ಈ ಪ್ರಕಾರ ಮೋಸಹೋಗಬೇಡಿರಿ. ಅವನನ್ನು ನಂಬಲೂಬೇಡಿರಿ. ಯಾವ ರಾಜ್ಯ ಜನಾಂಗಗಳ ದೇವತೆಯಾದರೂ ತನ್ನ ಪ್ರಜೆಯನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ನಿಮ್ಮ ದೇವರಂಥವನು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ ಎಂದು ಹೇಳಿಸಿದನು.


ಯೆಹೋವನೇ, ಅಶ್ಶೂರದ ಅರಸರು ದೇಶಜನಾಂಗಗಳನ್ನು ಹಾಳುಮಾಡಿ


ಅದಕ್ಕೆ ಫರೋಹನು - ಯೆಹೋವನೆಂಬವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲ್ಯರನ್ನು ಹೋಗಗೊಡಿಸುವದೇಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ ಇಸ್ರಾಯೇಲ್ಯರು ಹೊರಟುಹೋಗುವದಕ್ಕೆ ನಾನು ಒಪ್ಪುವದೇ ಇಲ್ಲ ಅಂದನು.


ಆ ಸೇನಾಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು; ಏನೂ ಅನ್ನಲಿಲ್ಲ.


ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.


ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಕತ್ತಿಗಳೇ. ನಮ್ಮನ್ನು ಕೇಳುವವರು ಯಾರು ಅಂದುಕೊಳ್ಳುತ್ತಾರೆ.


ನಾನಾದರೋ ನೀನು ಐಗುಪ್ತದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ. ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ವಿನಹ ಯಾವ ರಕ್ಷಕನೂ ಇಲ್ಲ.


ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಉಳಿಯುವಿಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು