Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:36 - ಕನ್ನಡ ಸತ್ಯವೇದವು J.V. (BSI)

36 ಆ ಸೇನಾಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು; ಏನೂ ಅನ್ನಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆ ಸೇನಾಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು. ಏನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆ ಸೇನಾಧಿಪತಿಗೆ ಯಾವ ಉತ್ತರವನ್ನು ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಏನನ್ನೂ ಹೇಳದೆ ಸುಮ್ಮನಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆದರೆ ಜನರೆಲ್ಲರೂ ಸುಮ್ಮನಿದ್ದರು, ರಾಜನಾದ ಹಿಜ್ಕೀಯನು ಜನರಿಗೆ ಆಜ್ಞಾಪಿಸಿದ್ದರಿಂದ ಅವರು ಸೇನಾಧಿಪತಿಯೊಂದಿಗೆ ಒಂದು ಮಾತನ್ನೂ ಆಡಲಿಲ್ಲ. “ಅವನಿಗೆ ಏನನ್ನೂ ಹೇಳಬೇಡಿ” ಎಂದು ಹಿಜ್ಕೀಯನು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆದರೆ ಜನರು ಅವನಿಗೆ ಪ್ರತ್ಯುತ್ತರ ಕೊಡದೆ ಸುಮ್ಮನಿದ್ದರು. ಏಕೆಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:36
9 ತಿಳಿವುಗಳ ಹೋಲಿಕೆ  

ದೇವರ ವಸ್ತುವನ್ನು ನಾಯಿಗಳಿಗೆ ಹಾಕಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಚೆಲ್ಲಿದರೆ ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು; ಇದು ದುಷ್ಕಾಲವೇ ಸರಿ.


ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದೀಯೆ.


ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೆ ಕಳಂಕವಾಗುವದು.


ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು; ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕುಕ್ಕೆಹಾಕಿಕೊಂಡಿರುವೆನು ಅಂದುಕೊಂಡೆನು.


ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ ಅನ್ನುತ್ತಾನೆ ಎಂದು ಹೇಳಿದನು.


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತಾಡುವ ಸಮಯ, ಪ್ರೀತಿಸುವ ಸಮಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು