Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:5 - ಕನ್ನಡ ಸತ್ಯವೇದವು J.V. (BSI)

5 ಇವನು ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಮುಂಚೆಯೂ ತರುವಾಯವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇವನು ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯಲ್ಲೆ ಭರವಸೆಯಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹಿಜ್ಕೀಯನು ಇಸ್ರೇಲಿನ ದೇವರಾದ ಯೆಹೋವನಲ್ಲಿ ನಂಬಿಕೆಯಿಟ್ಟನು. ಯೆಹೂದದ ರಾಜರುಗಳಲ್ಲೆಲ್ಲಾ ಹಿಜ್ಕೀಯನಂಥವರು ಅವನ ಮುಂಚೆಯಾಗಲಿ ಅವನ ನಂತರವಾಗಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಿಜ್ಕೀಯನು ಇಸ್ರಾಯೇಲಿನ ಯೆಹೋವ ದೇವರಲ್ಲಿ ಭರವಸೆವುಳ್ಳವನಾಗಿದ್ದನು. ಅವನಿಗೆ ಮುಂಚೆ ಇದ್ದವರಲ್ಲಿಯೂ, ಅವನ ತರುವಾಯ ಯೆಹೂದದ ಸಮಸ್ತ ಅರಸುಗಳಲ್ಲಿಯೂ ಅವನ ಹಾಗೆ ಒಬ್ಬರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:5
20 ತಿಳಿವುಗಳ ಹೋಲಿಕೆ  

ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಮುಂಚೆಯೂ ತರುವಾಯವೂ ಇರಲಿಲ್ಲ.


ಅವರ ಮುಖಾಂತರವಾಗಿ ಅವನಿಗೆ - ನೀನು ನಂಬುವ ದೇವರು - ನಾನು ಯೆರೂಸಲೇಮನ್ನು ಅಶ್ಶೂರದ ಅರಸನ ಕೈಗೆ ಒಪ್ಪಿಸುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.


ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರು ಅವನಲ್ಲಿ ಇಷ್ಟಪಟ್ಟರೆ ಈಗ ಅವನನ್ನು ಬಿಡಿಸಲಿ; ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ ಎಂದು ಹಾಸ್ಯದಿಂದ ಮಾತಾಡುತ್ತಿದ್ದರು.


ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.


ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವದು.


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೇತನವನ್ನು ಆತನ ಮುಂದೆ ಸ್ಥಾಪಿಸುವೆನು.


ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನೂ ಬಹುದುರಾಚಾರಿಯೂ ಆದ ಅಹಜ್ಯನೊಡನೆ ಒಡಂಬಡಿಕೆಮಾಡಿಕೊಂಡನು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.


ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು


ಒಂದು ವೇಳೆ ನೀನು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾ ಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳು ಮಾಡಿದನಲ್ಲಾ!


ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪುಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ರಬ್ಷಾಕೆಯು ಅವರಿಗೆ - ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು