Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:6 - ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಇವನು ಯೆಹೋವನನ್ನೇ ಹೊಂದಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ ಆತನು ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಯನ್ನು ಕೈಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ, ಇವನು ಸರ್ವೇಶ್ವರನನ್ನೇ ಹೊಂದಿಕೊಂಡು ಅವರನ್ನು ಬಿಡದೆ ಅನುಸರಿಸುತ್ತಾ, ಅವರು ಮೋಶೆಯ ಮುಖಾಂತರ ಅನುಗ್ರಹಿಸಿದ ಆಜ್ಞೆಗಳನ್ನು ಕೈಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹಿಜ್ಕೀಯನು ಯೆಹೋವನಿಗೆ ಬಹಳ ನಂಬಿಕೆಯುಳ್ಳವನಾಗಿದ್ದನು. ಅವನು ಯೆಹೋವನನ್ನು ಅನುಸರಿಸುವುದನ್ನು ನಿಲ್ಲಿಸಲೇ ಇಲ್ಲ. ಯೆಹೋವನು ಮೋಶೆಗೆ ನೀಡಿದ ಆಜ್ಞೆಗಳಿಗೆ ಅವನು ವಿಧೇಯನಾಗಿ ಅನುಸರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟುಬಿಡದೆ, ದೇವರನ್ನೇ ಆತುಕೊಂಡು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನು ಕೈಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:6
15 ತಿಳಿವುಗಳ ಹೋಲಿಕೆ  

ಈವರೆಗೆ ಹೇಗೋ ಹಾಗೆಯೇ ಇನ್ನು ಮುಂದಕ್ಕೂ ನಿಮ್ಮ ದೇವರಾದ ಯೆಹೋವನನ್ನೇ ಹೊಂದಿಕೊಂಡಿರ್ರಿ.


ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು ಆತನ ಹೆಸರಿನ ಮೇಲೆಯೇ ಪ್ರಮಾಣ ಮಾಡಬೇಕು.


ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.


ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ದೇವರ ಮೇಲಣ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ. ಆತನ ಆಜ್ಞೆಗಳು ಭಾರವಾದವುಗಳಲ್ಲ.


ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು.


ಯೆಹೋವನು ದರ್ಶಿಗಳೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲ್ಯ ಯೆಹೂದ್ಯರಿಗೆ - ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪಿತೃಗಳಿಗೂ ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ ಎಂದು ಖಂಡಿತವಾಗಿ ಹೇಳಿದಾಗ


ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣಿಸಿಕೊಳ್ಳುವೆನು ಎಂದು ಹೇಳಿದನು.


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವಮೂರ್ತಿಗಳು, ಅಶೇರವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು; ಆಕಾಶಸೈನ್ಯ ಬಾಳ್‍ದೇವತೆ ಇವುಗಳನ್ನು ಪೂಜಿಸಿದರು;


ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ನಡೆದು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಮೇರೆಗೆ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ಯೆಹೂದ್ಯರು ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲ್ಯರ ಪದ್ಧತಿಯನ್ನು ಅನುಸರಿಸಿದದರಿಂದ


ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪುಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ಆದದರಿಂದ ಇಸ್ರಾಯೇಲ್ಯರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ ಆತನನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡುತ್ತಾ


ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪು ಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು