Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:11 - ಕನ್ನಡ ಸತ್ಯವೇದವು J.V. (BSI)

11 ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಉಳಿಯುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಶ್ಶೂರದ ಅರಸುಗಳು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿರುವರೆಂದು ಕೇಳಿರುವೆಯಲ್ಲಾ. ಹೀಗಿದ್ದ ಮೇಲೆ ನೀನು ತಪ್ಪಿಸಿಕೊಳ್ಳುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಸ್ಸೀರಿಯದ ಅರಸನು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಪಡಿಸಿದ್ದಾನೆಂಬ ಸಮಾಚಾರ ನಿನಗೆ ಮುಟ್ಟಿರಬೇಕು, ಹೀಗಿರುವಲ್ಲಿ ನೀನು ಮಾತ್ರ ತಪ್ಪಿಸಿಕೊಳ್ಳುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಶ್ಶೂರದ ರಾಜನು ಇತರ ಎಲ್ಲಾ ಜನಾಂಗಗಳಿಗೆ ಮಾಡಿದವುಗಳನ್ನು ನೀನು ಕೇಳಿರುವೆ. ನಾವು ಅವರನ್ನು ಸಂಪೂರ್ಣವಾಗಿ ನಾಶಗೊಳಿಸಿದೆವು! ನೀನು ರಕ್ಷಿಸಲ್ಪಡುವೆಯಾ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:11
9 ತಿಳಿವುಗಳ ಹೋಲಿಕೆ  

ಅವರ ಮುಖಾಂತರವಾಗಿ ಅವನಿಗೆ - ನೀನು ನಂಬುವ ದೇವರು - ನಾನು ಯೆರೂಸಲೇಮನ್ನು ಅಶ್ಶೂರದ ಅರಸನ ಕೈಗೆ ಒಪ್ಪಿಸುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.


ನನ್ನ ತಂದೆ ತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?


ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ ಅನ್ನುತ್ತಾನೆ ಎಂದು ಹೇಳಿದನು.


ಇಸ್ರಾಯೇಲ್ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವದಕ್ಕಾಗಿ - ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರೂ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸಲಾರನು ಎಂಬದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು