2 ಅರಸುಗಳು 19:15 - ಕನ್ನಡ ಸತ್ಯವೇದವು J.V. (BSI)15 ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್‍ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವನು ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಹಿಜ್ಕೀಯನು ಯೆಹೋವನ ಸನ್ನಿಧಿಯಲ್ಲಿ, “ಯೆಹೋವನೇ, ಕೆರೂಬಿಗಳ ಮೇಲೆ ರಾಜನಾಗಿ ಕುಳಿತುಕೊಳ್ಳುವ ಇಸ್ರೇಲರ ದೇವರೇ, ಲೋಕದ ರಾಜ್ಯಗಳಿಗೆಲ್ಲಾ ನೀನೊಬ್ಬನೇ ದೇವರಾಗಿರುವೆ. ನೀನು ಪರಲೋಕವನ್ನು ಮತ್ತು ಈ ಲೋಕವನ್ನು ಸೃಷ್ಟಿಸಿದೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ. ಅಧ್ಯಾಯವನ್ನು ನೋಡಿ |
ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು