Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:17 - ಕನ್ನಡ ಸತ್ಯವೇದವು J.V. (BSI)

17 ಯೆಹೋವನೇ, ಅಶ್ಶೂರದ ಅರಸರು ದೇಶಜನಾಂಗಗಳನ್ನು ಹಾಳುಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನೇ, ಅಶ್ಶೂರದ ಅರಸರು ದೇಶಗಳನ್ನೂ ಜನಾಂಗಗಳನ್ನೂ ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರಾ, ಅಸ್ಸೀರಿಯದ ರಾಜರು ಸಕಲ ರಾಷ್ಟ್ರಗಳನ್ನೂ ಹಾಗೂ ಅವರ ನಾಡುಗಳನ್ನೂ ಹಾಳುಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನೇ, ಅಶ್ಶೂರದ ರಾಜರು ಆ ರಾಜ್ಯಗಳನ್ನೆಲ್ಲ ನಾಶಗೊಳಿಸಿದ್ದು ನಿಜ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಯೆಹೋವ ದೇವರೇ, ಅಸ್ಸೀರಿಯದ ಅರಸರು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:17
19 ತಿಳಿವುಗಳ ಹೋಲಿಕೆ  

ಅವನ ಹೃದಯದ ರಹಸ್ಯಗಳು ಬೈಲಾಗುವವು; ಮತ್ತು ಅಡ್ಡಬಿದ್ದು ದೇವರನ್ನು ಆರಾಧಿಸಿ - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬದನ್ನು ಪ್ರಚುರ ಪಡಿಸುವನು.


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ ಪೊಂತ್ಯ ಪಿಲಾತನೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತವಾಗಿ ಕೂಡಿಕೊಂಡು


ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು - ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ ಎಂದು ದೃಢವಾಗಿ ಹೇಳಿದನು.


ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.


ಆದರೆ ನೀವು ನನ್ನನ್ನು ಕೊಂದುಹಾಕಿದ ಪಕ್ಷಕ್ಕೆ ನೀವೂ ಈ ಪಟ್ಟಣವೂ ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವದು ಖಂಡಿತ.


ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನ ಒಂದು ಮಾತು ಬಿದ್ದಿತು, ನೋಡಿರಿ - ಸೊಗಸಾದ ಅನೇಕ ದೊಡ್ಡ ಮನೆಗಳು ವಾಸಿಸುವವರೇ ಇಲ್ಲದೆ ಖಂಡಿತವಾಗಿ ಹಾಳಾಗುವವು.


ನೀನು ಹೇಳಿದ್ದು ಸತ್ಯವೇ ಸರಿ; ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವದು ಹೇಗೆ?


ಆದದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್ ಹಾರ ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆಯೊಯ್ದರು. ಅವರು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲ್ಯರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರ್ಯದೇಶವನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.


ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಅವನು ಇವನ ಮಾತಿಗೆ ಒಪ್ಪಿ ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತಕ್ಕೆ ಒಯ್ದನು.


ಆಗ ದೋಣಿಯಲ್ಲಿದ್ದವರು - ನಿಜವಾಗಿ ನೀನು ದೇವಕುಮಾರನು ಎಂದು ಹೇಳಿ ಆತನಿಗೆ ನಮಸ್ಕರಿಸಿದರು.


ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವುಗಳನ್ನು ಹಾಳು ಮಾಡುವದು ಅವರಿಗೆ ಸಾಧ್ಯವಾಯಿತು.


ಅವನು ಒಂದು ದಿವಸ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಕತ್ತಿಯಿಂದ ಕೊಂದು ಅರಾರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್‍ಹದ್ದೋನನು ಅರಸನಾದನು.


ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಿರಲಿ ಪರತಂತ್ರರಾಗಿರಲಿ ಎಲ್ಲರನ್ನೂ ಇಸ್ರಾಯೇಲ್ಯರೊಳಗಿಂದ ತೆಗೆದುಹಾಕುವೆನು.


ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಿತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು