Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:23 - ಕನ್ನಡ ಸತ್ಯವೇದವು J.V. (BSI)

23 ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ - ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ; ಅಲ್ಲಿನ ಬಹುದೂರ ನಿವಾಸಸ್ಥಳವನ್ನೂ ಉದ್ಯಾನ ವನಗಳನ್ನೂ ಪ್ರವೇಶಿಸಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ. ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನೀನು ನಿನ್ನ ದೂತರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ, ಅಲ್ಲದೆ ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ: ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ! ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ ಒಳಹೊಕ್ಕಿದ್ದೇನೆ ಅಲ್ಲಿನ ದೂರದ ನಿವಾಸಸ್ಥಳಗಳನ್ನೇ, ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡು ಮೇಡುಗಳನ್ನೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀನು ಯೆಹೋವನನ್ನು ನಿಂದಿಸಲು ನಿನ್ನ ಸಂದೇಶಕರನ್ನು ಬಳಸಿದೆ, ‘ನಾನು ನನ್ನ ಅನೇಕ ರಥಗಳೊಂದಿಗೆ ಉನ್ನತಗಿರಿಗಳಿಗೆ ಬಂದೆನು. ನಾನು ಲೆಬನೋನಿನ ದುರ್ಗಮ ಸ್ಥಳಗಳಿಗೆ ಹೋದೆನು. ನಾನು ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಲೆಬನೋನಿನ ಉತ್ತಮ ತುರಾಯಿಮರಗಳನ್ನೂ ಕಡಿದುರುಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿದ್ದೀ, “ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ, ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ, ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಗಡಿಸ್ಥಳಗಳಲ್ಲಿಯೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:23
15 ತಿಳಿವುಗಳ ಹೋಲಿಕೆ  

ಕೆಲವರು ರಥಬಲದಲ್ಲಿ, ಕೆಲವರು ಅಶ್ವ ಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ.


ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಯೆರೂಸಲೇವಿುನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇವಿುಗೆ ಬಂದು ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ಅದು ದೇಹಾತ್ಮಗಳನ್ನುಳಿಸದೆ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲಮಾಡುವದು; ದೇಶವೋ ಉಡುಗುತ್ತಿರುವ ರೋಗಿಯಂತಿರುವದು.


ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ; ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂವಿುಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾಡಿಸಿ ಬಾಯಿದೆರೆದು ಕೀಚುಗುಟ್ಟುವ ಯಾರೂ ಇರಲಿಲ್ಲ ಎಂದು ಅಂದುಕೊಂಡನು.


ಇಸ್ರಾಯೇಲ್ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವದಕ್ಕಾಗಿ - ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರೂ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸಲಾರನು ಎಂಬದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.


ಅವನಿಗೆ ಇಳಕಲಿನ ಪ್ರದೇಶದಲ್ಲಿಯೂ ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳಿದ್ದದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದದರಿಂದ ಗುಡ್ಡ, ಫಲವತ್ತಾದ ಬೈಲು ಇವುಗಳಲ್ಲಿ ಹೊಲ ದ್ರಾಕ್ಷೇತೋಟಗಳ ಕೆಲಸಮಾಡುವವರನ್ನು ನೇವಿುಸಿದನು.


ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಪಂಥಹಾಕುವದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ; ನೀನು ಎಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?


ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿ


ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.


ಅವರು ಬಿದ್ದು ಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.


ಏಕಂದರೆ ಅವನು ತನ್ನೊಳಗೆ - ನನ್ನ ಜ್ಞಾನಭುಜ ಬಲಗಳಿಂದಲೇ ಇದನ್ನು ಮಾಡಿದ್ದೇನೆ, ನಾನೇ ವಿವೇಕಿ; ಜನಾಂಗಗಳ ಎಲ್ಲೆಗಳನ್ನು ಕಿತ್ತು ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು