Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:29 - ಕನ್ನಡ ಸತ್ಯವೇದವು J.V. (BSI)

29 ಈ ಮಾತುಗಳು ನೆರವೇರುವವೆಂಬದಕ್ಕೆ ನೀವು ಈ ವರುಷದಲ್ಲಿ ಕೂಳೆ ಬೆಳೆಯನ್ನೂ ಮುಂದಿನ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮೂರನೆಯ ವರುಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ ದ್ರಾಕ್ಷೇತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವದೇ ಗುರುತಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಈ ಮಾತುಗಳು ನೆರವೇರುವವು ಎಂಬುದಕ್ಕೆ ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ, ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು, ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ ಹೀಗೆಂದನು: “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು: ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯ ಮಾಡಿ ಶೇಖರಿಸಿದ್ದನ್ನು ಅನುಭವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ನಾನು ನಿನಗೆ ಸಹಾಯ ಮಾಡುತ್ತೇನೆಂಬುದಕ್ಕೆ ಇದು ಸಾಕ್ಷಿಯ ಗುರುತಾಗಿದೆ: ಈ ವರ್ಷ ನೀವು ತಾನಾಗಿಯೇ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಮುಂದಿನ ವರ್ಷ ನೀವು ಬೀಜದಿಂದ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೆಳೆಸಿದ ಧಾನ್ಯವನ್ನು ಒಟ್ಟುಗೂಡಿಸುತ್ತೀರಿ. ನೀವು ದ್ರಾಕ್ಷಿತೋಟಗಳನ್ನು ಬೆಳೆಸುತ್ತೀರಿ; ಅವುಗಳ ದ್ರಾಕ್ಷಿಯನ್ನು ತಿನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಹಿಜ್ಕೀಯನೇ, ಇದು ನಿಮಗೆ ಸಂಕೇತವಾಗಿರುವದು, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:29
13 ತಿಳಿವುಗಳ ಹೋಲಿಕೆ  

ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.


ಆತನು ನಿಮಗೆ ಗೊತ್ತಾಗುವದಕ್ಕೆ ಗುರುತೇನಂದರೆ - ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವದನ್ನು ಕಾಣುವಿರಿ ಎಂದು ಹೇಳಿದನು.


ಈ ಮಾತುಗಳು ನೆರವೇರುವವೆಂಬದಕ್ಕೆ ನೀವು ಈ ವರುಷದಲ್ಲಿ ಕೂಳೆಬೆಳೆಯನ್ನೂ ಮುಂದಿನ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮೂರನೆಯ ವರುಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ ದ್ರಾಕ್ಷೇತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವದೇ ಗುರುತಾಗಿರುವದು.


ಇದೆಲ್ಲಾ ನೆರವೇರುವದೆಂಬದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಫೀನೆಹಾಸರು ಒಂದೇ ದಿವಸದಲ್ಲಿ ಸಾಯುವದೇ ಗುರುತಾಗಿರುವದು.


ಯೆಹೋವನು ಅವನನ್ನು ಕುರಿತು - ಕನ್ನಿಕೆಯಾಗಿರುವ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯ ಮಾಡುತ್ತಾಳೆ; ಯೆರೂಸಲೇಮ್ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.


ಹೊಲಗಳನ್ನು ಬಿತ್ತಿ ದ್ರಾಕ್ಷಾಲತೆಗಳನ್ನು ನೆಟ್ಟು ಆದಾಯವನ್ನು ಕೂಡಿಸಿಕೊಂಡರು.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.


ಆದರೆ ಅಂಥ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂವಿುಯಲ್ಲಿ ಹುಟ್ಟಿದ್ದು ನಿಮಗೂ ನಿಮ್ಮ ದಾಸದಾಸಿಯರಿಗೂ ಕೂಲಿಯವರಿಗೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು