2 ಅರಸುಗಳು 19:31 - ಕನ್ನಡ ಸತ್ಯವೇದವು J.V. (BSI)31 ಯೆರೂಸಲೇವಿುನಲ್ಲಿ ಉಳಿದವರು ಹರಡಿಕೊಳ್ಳುವರು; ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿ ಹೊಂದುವರು; ಯೆಹೋವನ ಆಗ್ರಹವೇ ಇದನ್ನು ನೆರವೇರಿಸುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯೆರೂಸಲೇಮಿನಲ್ಲಿ ಉಳಿದವರು ಹಬ್ಬಿ ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ದಿಹೊಂದುವರು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವೇ ಇದನ್ನು ನೆರವೇರಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು; ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು. ಸರ್ವೇಶ್ವರಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಜೆರುಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು; ಚಿಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿ ಹೊಂದುವರು; ಯೆಹೋವನ ಸ್ವಾಭಿಮಾನವೇ ಇದನ್ನು ನೆರವೇರಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು. ಅಧ್ಯಾಯವನ್ನು ನೋಡಿ |
ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.