2 ಅರಸುಗಳು 19:4 - ಕನ್ನಡ ಸತ್ಯವೇದವು J.V. (BSI)4 ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸೇನಾಧಿಪತಿಯ ಒಡೆಯನಾದ ಅಶ್ಶೂರದ ರಾಜನು, ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟದ್ದನ್ನು ನುಡಿಯಲು ಅವನನ್ನು ಕಳುಹಿಸಿದನು. ನಿಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲ ಕೇಳಿರುತ್ತಾನೆ. ಯೆಹೋವನು ಶತ್ರುಗಳನ್ನು ತಪ್ಪಿತಸ್ಥರೆಂದು ನಿರ್ಧರಿಸಬಹುದು! ಆದ್ದರಿಂದ ಇನ್ನೂ ಜೀವಸಹಿತ ಉಳಿದಿರುವ ಜನರಿಗಾಗಿ ಪ್ರಾರ್ಥಿಸಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು,’ ” ಎಂದರು. ಅಧ್ಯಾಯವನ್ನು ನೋಡಿ |
ಹೀಗಿರಲಾಗಿ ಯೆಹೋವನು ಆ ದಿನದಲ್ಲಿ ಸೂಚಿಸಿದಂಥ ಈ ಪರ್ವತಪ್ರದೇಶವನ್ನು ನನಗೆ ಕೊಡು. ಇದರಲ್ಲಿ ಉನ್ನತ ಪುರುಷರಿರುತ್ತಾರೆಂದೂ ಇದರ ಪಟ್ಟಣಗಳು ದೊಡ್ಡವೂ ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನು ಕೇಳಿದಿಯಲ್ಲಾ. ಅವರೆಲ್ಲರನ್ನೂ ಓಡಿಸಿ ಬಿಡುವದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಿರೀಕ್ಷಿಸಿಕೊಂಡಿದ್ದೇನೆ ಅಂದನು.