Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:15 - ಕನ್ನಡ ಸತ್ಯವೇದವು J.V. (BSI)

15 ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಲಿಯವರು ಇದನ್ನು ಕಂಡು ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿತೆಂದು ತಿಳಿದುಕೊಂಡು ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೂರದಲ್ಲಿ ನಿಂತಿದ್ದ ಜೆರಿಕೋವಿನ ಪ್ರವಾದಿಮಂಡಲಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮಶಕ್ತಿ ಎಲೀಷನ ಮೇಲೆ ಬಂದು ನೆಲಸಿದೆ,” ಎಂದು ತಿಳಿದುಕೊಂಡರು. ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನನ್ನು ಕಂಡು, “ಎಲೀಯನ ಆತ್ಮವು ಈಗ ಎಲೀಷನ ಮೇಲಿದೆ!” ಎಂದು ಹೇಳಿ ಎಲೀಷನನ್ನು ಭೇಟಿಮಾಡಲು ಬಂದರು. ಅವರು ಎಲೀಷನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:15
21 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನ ಹೆಸರಿನ ನಿವಿುತ್ತ ನಿಂದೆಗೆ ಗುರಿಯಾದರೆ ಧನ್ಯರೇ; ತೇಜೋಮಯವಾದ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.


ಅದಕ್ಕಾತನು - ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ಬಲವು ಪೂರ್ಣಸಾಧಕವಾಗುತ್ತದೆ ಎಂದು ನನಗೆ ಹೇಳಿದ್ದಾನೆ. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲಸಿಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾವಸ್ಥೆಗಳ ವಿಷಯದಲ್ಲಿಯೇ ಬಹುಸಂತೋಷವಾಗಿ ಹೆಚ್ಚಳಪಡುವೆನು.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; ನಿಮ್ಮಲ್ಲಿ ಆವೇಶಿಸಿರುವ ನನ್ನ ಆತ್ಮವೂ ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ ನಿಮ್ಮ ಬಾಯಿಂದಾಗಲಿ ನಿಮ್ಮ ಸಂತತಿಯ ಬಾಯಿಂದಾಗಲಿ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.


ಆ ಅಂಕುರದ ಮೇಲೆ ಜ್ಞಾನವಿವೇಕದಾಯಕ ಆತ್ಮ, ಆಲೋಚನಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆಯನ್ನೂ ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವದು;


ಆಕೆಯು ಹತ್ತಿರ ಬಂದು ಅವನ ಪಾದಗಳಿಗೆ ಬಿದ್ದು ಸಾಷ್ಟಾಂಗನಮಸ್ಕಾರಮಾಡಿ ಮಗನನ್ನು ತೆಗೆದುಕೊಂಡು ಹೋದಳು.


ಯೆರಿಕೋವಿನ ಜನರು ಎಲೀಷನಿಗೆ - ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೇದಾಗಿದೆ; ಆದರೆ ನೀರು ಕೆಟ್ಟದ್ದಾಗಿರುವದರಿಂದ ಬಂಜೆತನ ಹೆಚ್ಚು ಎಂದು ಹೇಳಿದರು.


ಪ್ರವಾದಿ ಮಂಡಲಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.


ಆ ದಿವಸ ಯೆಹೋವನು ಯೆಹೋಶುವನನ್ನು ಇಸ್ರಾಯೇಲ್ಯರೆಲ್ಲರ ದೃಷ್ಟಿಯಲ್ಲಿ ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ ಇವನು ಜೀವದಿಂದಿದ್ದ ಕಾಲವೆಲ್ಲಾ ಭಯಭಕ್ತಿಯುಳ್ಳವರಾಗಿದ್ದರು.


ಆಗ ಯೆಹೋವನು ಯೆಹೋಶುವನಿಗೆ - ನಾನು ಇಂದಿನಿಂದ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂಬದು ಅವರಿಗೆ ಗೊತ್ತಾಗುವದು.


ಸಮೂಹದವರೆಲ್ಲರೂ ಅವನಿಗೆ ವಿಧೇಯರಾಗುವಂತೆ ನಿನಗಿರುವ ಗೌರವವನ್ನು ಅವನಿಗೆ ಕೊಡಬೇಕು.


ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲ್ಯರ ಅರಸನನ್ನಾಗಿಯೂ ಅಬೇಲ್‍ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭೀಷೇಕಿಸು.


ಅಲ್ಲಿಂದ ಫಿಲಿಷ್ಟಿಯರ ಠಾಣವಿರುವ ದೇವಗಿರಿಯನ್ನು ಮುಟ್ಟಿದಾಗ ಮುಂಗಡೆಯಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು;


ಪ್ರವಾದಿಮಂಡಲಿಯವರಲ್ಲಿ ಒಬ್ಬನು ಯೆಹೋವ ಪ್ರೇರಿತನಾಗಿ ತನ್ನ ಜೊತೆಗಾರನಿಗೆ - ನನ್ನನ್ನು ಹೊಡಿ ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಅವನು - ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದದರಿಂದ ಅವರಿಗೋಸ್ಕರ ಬೇಗನೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತುಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬದಾಗಿ ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು ಎಂದು ಉತ್ತರಕೊಟ್ಟನು.


ಪ್ರವಾದಿಯಾದ ಎಲೀಷನು ಪ್ರವಾದಿ ಮಂಡಲಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ - ನಡುಕಟ್ಟಿ ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗು.


ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ - ನಾನು ಪ್ರವಾದಿಯಲ್ಲ, ಪ್ರವಾದಿ ಮಂಡಲಿಗೆ ಸೇರಿದವನೂ ಅಲ್ಲ, ನಾನು ಗೊಲ್ಲನು, ಅತ್ತಿಹಣ್ಣು ಕೀಳುವವನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು