ಯೆರಿಕೋವಿನ ಜನರು ಎಲೀಷನಿಗೆ - ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೇದಾಗಿದೆ; ಆದರೆ ನೀರು ಕೆಟ್ಟದ್ದಾಗಿರುವದರಿಂದ ಬಂಜೆತನ ಹೆಚ್ಚು ಎಂದು ಹೇಳಿದರು.
ಅವರು ತಂದುಕೊಡಲು ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ - ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.