Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:21 - ಕನ್ನಡ ಸತ್ಯವೇದವು J.V. (BSI)

21 ಅವರು ತಂದುಕೊಡಲು ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ - ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ, “ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪುಹಾಕಿದನು; “’ಇನ್ನು ಮುಂದೆ ಈ ನೀರಿನಿಂದ ಮರಣವಾಗಲಿ ಗರ್ಭಪಾತವಾಗಲಿ ಸಂಭವಿಸದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ,’ ಎಂಬುದಾಗಿ ಸರ್ವೇಶ್ವರ ನುಡಿದಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಂತರ ಎಲೀಷನು ನೆಲದಿಂದ ನೀರು ಹರಿಯುತ್ತಿದ್ದ ಸ್ಥಳಕ್ಕೆ ಹೋದನು. ಎಲೀಷನು ಉಪ್ಪನ್ನು ನೀರಿನಲ್ಲಿ ಎಸೆದು, “‘ನಾನು ಈ ನೀರನ್ನು ಶುಚಿಗೊಳಿಸಿದ್ದೇನೆ! ಇಲ್ಲಿಂದಾಚೆಗೆ ಈ ನೀರು ಯಾರಿಗೂ ಸಾವನ್ನು ಮತ್ತು ಬಂಜೆತನವನ್ನು ಉಂಟುಮಾಡುವುದಿಲ್ಲ ಮತ್ತು ಈ ಭೂಮಿಯಲ್ಲಿ ಬೆಳೆಗಳು ಬೆಳೆಯುತ್ತವೆ’ ಎಂದು ಯೆಹೋವನು ಹೇಳುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ನೀರಿನ ಬುಗ್ಗೆಯ ಬಳಿಗೆ ಹೊರಟುಹೋಗಿ, ನೀರಿನಲ್ಲಿ ಉಪ್ಪು ಹಾಕಿ, “ ‘ಆ ನೀರನ್ನು ಶುದ್ಧಮಾಡಿದೆನು. ಇನ್ನು ಮೇಲೆ ಅದರಿಂದ ಮರಣವೂ, ಬಂಜೆತನವೂ ಆಗದಿರಲಿ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:21
14 ತಿಳಿವುಗಳ ಹೋಲಿಕೆ  

ಆಗ ಅವನು - ಹಿಟ್ಟನ್ನು ತಂದುಕೊಡಿರಿ ಎಂದು ಹೇಳಿದನು; ಅವರು ತರಲು ಅದನ್ನು ಆ ಪಾತ್ರೆಯೊಳಗೆ ಹಾಕಿ ಈಗ ಇದನ್ನು ಬಡಿಸಬಹುದು ಅಂದನು. ಕೂಡಲೆ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.


ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವದರಿಂದ ಅದು ಯಾವ ನೈವೇದ್ಯದ್ರವ್ಯವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪು ಸೇರೇ ಇರಬೇಕು.


ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.


ಇದನ್ನು ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರುಮಾಡಿ ಆ ಕೆಸರನ್ನು ಅವನ ಕಣ್ಣುಗಳಿಗೆ ಹಚ್ಚಿ -


ದೇವರ ಮನುಷ್ಯನು ಅವನನ್ನು - ಅದು ಎಲ್ಲಿ ಬಿದ್ದಿತು ಎಂದು ಕೇಳಲು ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದನು; ಕೂಡಲೆ ಕೊಡಲಿಯು ತೇಲಾಡಿತು.


ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪೆಯಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.


ನನ್ನ ನಿವಿುತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ಆಗ ಎಲೀಷನು ಅವರಿಗೆ - ಒಂದು ಹೊಸ ಮಡಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದುಕೊಡಿರಿ ಅಂದನು.


ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು; ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು