Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:3 - ಕನ್ನಡ ಸತ್ಯವೇದವು J.V. (BSI)

3 ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು. ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಎದುರುಗೊಂಡು ಅವನನ್ನು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬೇತೇಲಿನ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನನ್ನು, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, “ಗೊತ್ತಿದೆ ನೀವು ಸುಮ್ಮನಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾದರು. “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರೆಂಬುದು ನಿಮಗೆ ಗೊತ್ತೇ?” ಎಂದು ಕೇಳಿದರು. ಅದಕ್ಕೆ ಎಲೀಷನು, “ನನಗೆ ಗೊತ್ತಿದೆ; ಆದರೆ ನೀವು ಸುಮ್ಮನಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬೇತೇಲಿನಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು, ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು. ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಇಂದು ಯೆಹೋವ ದೇವರು ನಿನ್ನ ಯಜಮಾನನನ್ನು ನಿನ್ನಿಂದ ತೆಗೆದುಕೊಳ್ಳುವರೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ಹೌದು, ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:3
17 ತಿಳಿವುಗಳ ಹೋಲಿಕೆ  

ಎಲೀಷನು ತಿರಿಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿ ಮಂಡಲಿಯವರು ತನ್ನ ಮುಂದೆ ಕೂಡಿ ಬರಲು ಅವನು ತನ್ನ ಸೇವಕನಿಗೆ - ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆಮಾಡು ಎಂದು ಆಜ್ಞಾಪಿಸಿದನು.


ಒಂದು ದಿವಸ ಪ್ರವಾದಿಮಂಡಲಿಯವರಲ್ಲೊಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ - ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು; ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನೆಂಬದು ನಿನಗೆ ಗೊತ್ತುಂಟಲ್ಲಾ; ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ತೆಗೆದುಕೊಂಡು ಹೋಗುವದಕ್ಕೆ ಬಂದಿದ್ದಾನೆ ಎಂದು ಮೊರೆಯಿಟ್ಟಳು.


ಪ್ರವಾದಿಯಾದ ಎಲೀಷನು ಪ್ರವಾದಿ ಮಂಡಲಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ - ನಡುಕಟ್ಟಿ ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗು.


ಪ್ರವಾದಿಮಂಡಲಿಯವರಲ್ಲಿ ಒಬ್ಬನು ಯೆಹೋವ ಪ್ರೇರಿತನಾಗಿ ತನ್ನ ಜೊತೆಗಾರನಿಗೆ - ನನ್ನನ್ನು ಹೊಡಿ ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಿತನಾದೆನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ ನಾನು ಅಭಿಮಾನಿಯಾಗಿದ್ದೆನು.


ಆಹಾ, ನಾನೂ ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದುಂಟಾದ ಗುರುತುಗಳಾಗಿಯೂ ಅದ್ಭುತಗಳಾಗಿಯೂ ಇಸ್ರಾಯೇಲ್ಯರ ಮಧ್ಯದಲ್ಲಿದ್ದೇವೆ.


ಅವನು - ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದದರಿಂದ ಅವರಿಗೋಸ್ಕರ ಬೇಗನೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತುಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬದಾಗಿ ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು ಎಂದು ಉತ್ತರಕೊಟ್ಟನು.


ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಲಿಯವರು ಇದನ್ನು ಕಂಡು ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿತೆಂದು ತಿಳಿದುಕೊಂಡು ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು.


ಪ್ರವಾದಿ ಮಂಡಲಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.


ಅಲ್ಲಿನ ಪ್ರವಾದಿಮಂಡಲಿಯವರು ಅವನನ್ನು ಎದುರುಗೊಂಡು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ಕರೆದುಕೊಳ್ಳುವನೆಂದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು - ಗೊತ್ತುಂಟು, ಸುಮ್ಮನಿರ್ರಿ ಎಂದು ಉತ್ತರಕೊಟ್ಟನು.


(ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹುಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರುಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಅವನು ಅವನನ್ನು ಹಿಡಿದು ತರುವದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪರವಶವಾಗಿ ಮಾತಾಡುವದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವದನ್ನೂ ಕಂಡಾಗ ದೇವರ ಆತ್ಮವು ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.


ಆತನು ತನ್ನ ಜನರನ್ನು ಪ್ರೀತಿಸುತ್ತಾನೆ; [ಯೆಹೋವನೇ,] ನಿನ್ನ ಭಕ್ತರೆಲ್ಲರೂ ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣ ಸನ್ನಿಧಾನದಲ್ಲಿ ಕೂತಿರುವರು; ನೀನು ಹೇಳುವ ಆಜ್ಞೆಗಳನ್ನು ಶಿರಸ್ಸಾವಹಿಸುವರು.


ಅಲ್ಲಿಂದ ಫಿಲಿಷ್ಟಿಯರ ಠಾಣವಿರುವ ದೇವಗಿರಿಯನ್ನು ಮುಟ್ಟಿದಾಗ ಮುಂಗಡೆಯಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು;


ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ - ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರವ ಈ ಸ್ಥಳವು ಬಲು ಇಕ್ಕಟ್ಟಾಗಿದೆ.


ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ - ನಾನು ಪ್ರವಾದಿಯಲ್ಲ, ಪ್ರವಾದಿ ಮಂಡಲಿಗೆ ಸೇರಿದವನೂ ಅಲ್ಲ, ನಾನು ಗೊಲ್ಲನು, ಅತ್ತಿಹಣ್ಣು ಕೀಳುವವನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು