Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:4 - ಕನ್ನಡ ಸತ್ಯವೇದವು J.V. (BSI)

4 ಗೊತ್ತುಂಟು, ಸುಮ್ಮನಿರ್ರಿ ಅಂದನು. ಎಲೀಯನು ಎಲೀಷನಿಗೆ - ದಯವಿಟ್ಟು ಇಲ್ಲೇ ಇರು; ಯೆಹೋವನು ನನಗೆ ಯೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ ಎಂದು ಹೇಳಿದನು. ಆದರೆ ಎಲೀಷನು - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವದಿಲ್ಲ ಎಂದು ಉತ್ತರಕೊಟ್ಟು ಅವನ ಜೊತೆಯಲ್ಲಿ ಯೆರಿಕೋವಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಯೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಎಲೀಷನು ಅವನ ಜೊತೆಯಲ್ಲಿ ಯೆರಿಕೋವಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲೇ ಇರು; ಸರ್ವೇಶ್ವರ ನನಗೆ ಜೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದು ಹೇಳಿದನು. ಆದರೆ ಎಲೀಷನು, “ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರುವುದಿಲ್ಲ,” ಎಂದು ಉತ್ತರಕೊಟ್ಟು ಅವನ ಜೊತೆಯಲ್ಲೇ ಜೆರಿಕೋವಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೆರಿಕೊವಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ!” ಎಂದು ಹೇಳಿದನು. ಇಬ್ಬರೂ ಜೆರಿಕೊವಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಎಲೀಯನು ಅವನಿಗೆ, “ಎಲೀಷನೇ, ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೆರಿಕೋವಿಗೆ ಕಳುಹಿಸುತ್ತಿದ್ದಾರೆ” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:4
10 ತಿಳಿವುಗಳ ಹೋಲಿಕೆ  

ಆಗ ಎಲೀಯನು ಎಲೀಷನಿಗೆ - ದಯವಿಟ್ಟು ನೀನು ಇಲ್ಲೇ ಇರು; ಯೆಹೋವನು ನನಗೆ ಬೇತೇಲಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ ಅನ್ನಲು ಎಲೀಷನು - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವದಿಲ್ಲ ಎಂದು ಉತ್ತರಕೊಟ್ಟನು.


ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ - ಈ ಯೆರಿಕೋ ಪಟ್ಟಣವನ್ನು ಕಟ್ಟುವದಕ್ಕೆ ಕೈ ಹಚ್ಚುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರೀ ಮಗನನ್ನೂ ಬಾಗಲುಗಳನ್ನಿಡುವಾಗ ಕಿರೀ ಮಗನನ್ನೂ ಕಳೆದುಕೊಳ್ಳಲಿ ಎಂದು ಹೇಳಿದನು.


ಆತನು ಯೆರಿಕೋ ಊರನ್ನು ಹೊಕ್ಕು ದಾಟಿಹೋಗುತ್ತಿದ್ದನು.


ಆದರೂ ಹುಡುಗನ ತಾಯಿ - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲ ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು.


ಇವನ ಕಾಲದಲ್ಲಿ ಬೇತೇಲಿನವನಾದ ಹೀಯೇಲನು ಯೆರಿಕೋಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರೀಮಗನಾದ ಅಬೀರಾಮನನ್ನೂ ಬಾಗಲುಗಳನ್ನಿಡುವಾಗ ಕಿರೀಮಗನಾದ ಸೆಗೂಬನನ್ನೂ ಕಳಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.


ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ಇವರು ಅಪೊಸ್ತಲರ ಬೋಧನೆಯನ್ನು ಕೇಳುವದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ಹನ್ನಳು ಏಲಿಗೆ - ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.


(ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.)


ಆಕೆಯು - ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು