2 ಅರಸುಗಳು 2:9 - ಕನ್ನಡ ಸತ್ಯವೇದವು J.V. (BSI)9 ಅವರು ಆಚೇದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು - ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತೀ ಹೇಳು ಎಂದು ಕೇಳಿದನು. ಅದಕ್ಕೆ ಎಲೀಷನು - ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟು ಹೋಗುವ ಮೊದಲು, ನಾನು ನಿನಗೋಸ್ಕರ ಏನು ಮಾಡಬೇಕೆನ್ನುತ್ತೀ ಹೇಳು” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿನಗಿರುವ ಆತ್ಮದಲ್ಲಿ ನನಗೆ ಎರಡರಷ್ಟು ಪಾಲನ್ನು ಅನುಗ್ರಹಿಸು” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವರು ನದಿಯನ್ನು ದಾಟಿದ ಮೇಲೆ ಎಲೀಯನು ಎಲೀಷನಿಗೆ, “ದೇವರು ನನ್ನನ್ನು ನಿನ್ನಿಂದ ತೆಗೆದುಕೊಳ್ಳುವುದಕ್ಕೆ ಮುಂಚೆ, ನಾನು ನಿನಗೆ ಏನು ಮಾಡಬೇಕೆಂದು ನೀನು ಅಪೇಕ್ಷಿಸುವೆ?” ಎಂದು ಕೇಳಿದನು. ಎಲೀಷನು, “ನಿನ್ನ ಆತ್ಮವು ನನ್ನ ಮೇಲೆ ಎರಡರಷ್ಟಿರಬೇಕೆಂದು ನಾನು ನಿನ್ನಲ್ಲಿ ಬೇಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು ದಾಟಿಹೋದ ತರುವಾಯ, ಎಲೀಯನು ಎಲೀಷನಿಗೆ, “ನಾನು ನಿನ್ನನ್ನು ಬಿಟ್ಟುಹೋಗುವುದಕ್ಕೆ ಮುಂಚೆ, ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು,” ಎಂದನು. ಅದಕ್ಕೆ ಎಲೀಷನು, “ನಿನ್ನ ಆತ್ಮದ ಎರಡು ಪಾಲನ್ನು ನಾನು ಬಾಧ್ಯವಾಗಿ ಹೊಂದುವಂತೆ ಮಾಡು,” ಎಂದನು. ಅಧ್ಯಾಯವನ್ನು ನೋಡಿ |