2 ಅರಸುಗಳು 20:1 - ಕನ್ನಡ ಸತ್ಯವೇದವು J.V. (BSI)1 ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ - ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆಮಾಡು; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆ ದಿನಗಳಲ್ಲಿ ಹಿಜ್ಕೀಯನು ಮಾರಕ ರೋಗದಿಂದ ನರಳುತ್ತಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನಿನ್ನ ಸಂಸಾರದ ವಿಷಯವಾಗಿ ವ್ಯವಸ್ಥೆಮಾಡು; ಏಕೆಂದರೆ, ‘ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ,’ ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ಸಮಯದಲ್ಲಿ ಹಿಜ್ಕೀಯನಿಗೆ ಕಾಯಿಲೆಯಾಗಿ ಸತ್ತಂತಾದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಹಿಜ್ಕೀಯನ ಬಳಿಗೆ ಹೋಗಿ, “ಯೆಹೋವನು ಹೀಗೆನ್ನುತ್ತಾನೆ. ‘ನಿನ್ನ ಮನೆಯನ್ನು ವ್ಯವಸ್ಥೆಗೊಳಿಸು; ಏಕೆಂದರೆ ನೀನು ಸಾಯುವೆ, ಬದುಕುವುದಿಲ್ಲ!’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |