Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:10 - ಕನ್ನಡ ಸತ್ಯವೇದವು J.V. (BSI)

10 ಹಿಜ್ಕೀಯನು - ನೆರಳು ಮುಂದೆ ಹೋಗುವದು ಸುಲಭ; ಆದದರಿಂದ ಹತ್ತು ಮೆಟ್ಲು ಹಿಂದೆ ಬರುವಂತೆ ಮಾಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ; ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದ್ದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಹಿಜ್ಕೀಯನು, “ನೆರಳು ಹತ್ತು ಮೆಟ್ಟಲು ಮುಂದೆ ಹೋಗುವುದು ಸಾಮಾನ್ಯ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:10
9 ತಿಳಿವುಗಳ ಹೋಲಿಕೆ  

ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವನು ನಾನು ನಡಿಸುವ ಕ್ರಿಯೆಗಳನ್ನು ತಾನೂ ನಡಿಸುವನು; ಮತ್ತು ಅವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ನಡಿಸುವನು. ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಆತನು ತನ್ನ ದೃಷ್ಟಿಯಲ್ಲಿ ಅಲ್ಪವಾಗಿರುವ ಈ ಕಾರ್ಯದ ಹೊರತಾಗಿ ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.


ಆಗ ಎಲೀಯನು ಅವನಿಗೆ - ನೀನು ದುರ್ಲಭವಾದದ್ದನ್ನು ಕೇಳಿಕೊಂಡಿ; ಆದರೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ಅದು ದೊರಕುವದು; ಇಲ್ಲವಾದರೆ ದೊರಕುವದಿಲ್ಲ ಅಂದನು.


ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಯೆಹೋವನಿಂದ ಗುರುತು ಕೇಳುತ್ತೀ; ಹಾಗಾದರೆ ನೆರಳು ಹತ್ತು ಮೆಟ್ಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು ಅಂದನು.


ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದನು.


ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಿಗೆ ಒಂದು ವಿಜ್ಞಾಪನೆ ಮಾಡಿದನು. ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನಿಲ್ಲಿರಿ! ಎಂದು ಇಸ್ರಾಯೇಲ್ಯರ ಸಮಕ್ಷದಲ್ಲಿ ಆಜ್ಞಾಪಿಸಲು


ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವವರೆಗೆ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್‍‍‍ಗ್ರಂಥದಲ್ಲಿ ಬರೆದದೆಯಲ್ಲಾ! ಹೀಗೆ ಸೂರ್ಯನು ಮುಣುಗಲಿಕ್ಕೆ ಆತುರಪಡದೆ ಹೆಚ್ಚುಕಡಿಮೆ ಒಂದು ದಿವಸ ಪೂರ್ತಿ ಆಕಾಶ ಮಧ್ಯದಲ್ಲಿಯೇ ನಿಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು