Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:12 - ಕನ್ನಡ ಸತ್ಯವೇದವು J.V. (BSI)

12 ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಬೆರೋದಕಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದನೆಂದು ಕೇಳಿ ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ ಬಹುಮಾನವನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬಿಲೋನಿಯದ ಅರಸನೂ ಆದ ಬೆರೋದಕ ಬಲದಾನ ಎಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದನೆಂದು ಕೇಳಿ ದೂತರ ಮುಖಾಂತರ ಅವನಿಗೆ ಪತ್ರವನ್ನೂ ಉಡುಗೊರೆಯನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಸಮಯದಲ್ಲಿ, ಬಲದಾನನ ಮಗನಾದ ಬೆರೋದಕ ಬಲದಾನ ಎಂಬುವನು ಬಾಬಿಲೋನಿನ ರಾಜನಾಗಿದ್ದನು. ಅವನು ಹಿಜ್ಕೀಯನಿಗೆ ಪತ್ರಗಳನ್ನು ಮತ್ತು ಕಾಣಿಕೆಯನ್ನು ಕಳುಹಿಸಿದನು. ಹಿಜ್ಕೀಯನು ಅಸ್ವಸ್ಥನಾಗಿದ್ದಾನೆ ಎಂಬುದನ್ನು ಬೆರೋದಕ ಬಲದಾನನು ತಿಳಿದುಕೊಂಡದ್ದರಿಂದ ಹೀಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:12
10 ತಿಳಿವುಗಳ ಹೋಲಿಕೆ  

ಆದದರಿಂದ ಅವನ ದೇಶದಲ್ಲುಂಟಾದ ಅದ್ಭುತದ ವಿಷಯವನ್ನು ವಿಚಾರಿಸುವದಕ್ಕಾಗಿ ಬಾಬೆಲಿನ ಪ್ರಭುಗಳ ರಾಯಭಾರಿಗಳು ಅವನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವದಕ್ಕೂ ಅವನ ಸರ್ವಾಂತರ್ಯವನ್ನು ತಿಳುಕೊಳ್ಳುವದಕ್ಕೂ ಅವನನ್ನು ಕೈಬಿಟ್ಟನು.


ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಎತ್ತಿ ಹೇಳಬೇಕು - ಆಹಾ, ಹಿಂಸಕನು ಕೊನೆಗೊಂಡನು, ರೇಗಾಟವು ನಿಂತಿತು!


ರಾಜ್ಯಗಳಿಗೆ ಶಿರೋರತ್ನವೂ ಕಸ್ದೀಯರ ಮಹಿಮೆಗೆ ಭೂಷಣವೂ ಆದ ಬಾಬೆಲಿಗೆ ದೇವರು ಕೆಡವಿದ ಸೊದೋಮ್ ಗೊಮೋರಗಳ ಗತಿಯು ಸಂಭವಿಸುವದು.


ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.


ದಾವೀದನು - ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವದಕ್ಕೋಸ್ಕರ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದಾಗ


(ತೋವಿಗೂ ಹದದೆಜೆರನಿಗೂ ವಿರೋಧವಿತ್ತು.) ದಾವೀದನು ಹದದೆಜೆರನ ಮೇಲೆ ಬಿದ್ದು ಅವನನ್ನು ಸೋಲಿಸಿದದರಿಂದ ತೋವು ದಾವೀದನನ್ನು ವಂದಿಸುವದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ ಬೆಳ್ಳಿ ಬಂಗಾರದ ಪಾತ್ರೆಗಳನ್ನು ತಂದನು.


ಸಮಸ್ತಲೋಕದ ಭಾಷೆಯನ್ನು ಯೆಹೋವನು ಅಲ್ಲಿ ತಾರುಮಾರುಮಾಡಿ ಅವರನ್ನು ಅಲ್ಲಿಂದ ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ ಎಂಬ ಹೆಸರಾಯಿತು.


ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದದರಿಂದ ಯೆಹೂದದ ಮೇಲೆಯೂ ಯೆರೂಸಲೇವಿುನ ಮೇಲೆಯೂ ದೇವಕೋಪವುಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು