Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:13 - ಕನ್ನಡ ಸತ್ಯವೇದವು J.V. (BSI)

13 ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ ಅವರಿಗೆ ಬೆಳ್ಳಿ ಬಂಗಾರ ಸುಗಂಧದ್ರವ್ಯ ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹಿಜ್ಕೀಯನು ಬಾಬಿಲೋನಿನ ಜನರನ್ನು ಸ್ವಾಗತಿಸಿ, ಅವರಿಗೆ ತನ್ನ ಮನೆಯಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ತೋರಿಸಿದನು. ಅವನು ತನ್ನ ಭಂಡಾರದಲ್ಲಿದ್ದ ಬೆಳ್ಳಿಬಂಗಾರಗಳನ್ನು, ಸುಗಂಧದ್ರವ್ಯಗಳನ್ನು, ಪರಿಮಳಭರಿತ ತೈಲವನ್ನು, ಆಯುಧಗಳನ್ನು ತೋರಿಸಿದನು. ಹಿಜ್ಕೀಯನ ಮನೆಯಲ್ಲಿ ಮತ್ತು ಅವನ ರಾಜ್ಯದಲ್ಲಿ ಅವರಿಗೆ ತೋರಿಸದೆ ಉಳಿದದ್ದು ಏನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಿಜ್ಕೀಯನು ಅವರ ಮಾತು ಕೇಳಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:13
12 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧ ದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧ ಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.


ಪಾಪಮಾಡದೆ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷನು ಲೋಕದಲ್ಲಿ ಇಲ್ಲವೇ ಇಲ್ಲ.


ನಿನ್ನ ದೃಷ್ಟಿಯು ಧನದ ಮೇಲೆ ಎರಗುತ್ತದೋ? ಧನವು ಅಷ್ಟರೊಳಗೆ ಮಾಯವಾಗುವದು; ಆಕಾಶದ ಕಡೆಗೆ ಹಾರುವ ಹದ್ದಿನಂತೆ ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ಅವರೆಲ್ಲರೂ ಅವನಿಗೆ ವರುಷ ವರುಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂದದ್ರವ್ಯ, ಕುದುರೆ, ಹೇಸರಕತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ಪ್ರತಿವರುಷ ಆರುನೂರರುವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು.


ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ ಅಪರಿವಿುತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವು ದೇಶಕ್ಕೆ ತಿರಿಗಿ ಬರಲೇ ಇಲ್ಲ.


ಆಕೆಯು ಸುಗಂಧದ್ರವ್ಯ, ಅಪರಿವಿುತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಯೆರೂಸಲೇವಿುಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.


ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನ ಬಳಿಗೆ ಬಂದು ಅವನನ್ನು - ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು ಎಂದು ಕೇಳಲು ಅವನು - ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದವರು ಎಂದು ಉತ್ತರ ಕೊಟ್ಟನು.


ಯೆಶಾಯನು ತಿರಿಗಿ ಅವನನ್ನು - ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು ಎಂದು ಕೇಳಲು ಅವನು - ಅರಮನೆಯಲ್ಲಿರುವದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರುವದಿಲ್ಲ ಅಂದನು.


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


ಯೆಹೋವನ ಈ ಮಾತನ್ನು ಸಾರು ಎಂದು ನನಗೆ ಅಪ್ಪಣೆಯಾಯಿತು - ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವವು; ಅವು ಹೊಲಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು