Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:21 - ಕನ್ನಡ ಸತ್ಯವೇದವು J.V. (BSI)

21 ಅವನು ಪಿತೃಗಳ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನು ಮೃತನಾಗಿ ಪಿತೃಗಳ ಬಳಿ ಸೇರಿದನು. ಅವನ ಸ್ಥಾನದಲ್ಲಿ ಅವನ ಮಗ ಮನಸ್ಸೆ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹಿಜ್ಕೀಯನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಲಾಯಿತು. ಹಿಜ್ಕೀಯನ ನಂತರ ಅವನ ಮಗನಾದ ಮನಸ್ಸೆಯು ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:21
8 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬಶ್ಮಶಾನ ಭೂವಿುಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.


ಉಜ್ಜೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಕುಷ್ಠರೋಗಿಯದೆಂದು ರಾಜಕುಟುಂಬಶ್ಮಶಾನವಿದ್ದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.


ಮನಸ್ಸೆಯು ಅರಸನಾದಾಗ ಹನ್ನೆರಡು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಐವತ್ತೈದು ವರುಷ ಆಳಿದನು; ಅವನ ತಾಯಿಯ ಹೆಸರು ಹೆಫ್ಚಿಬಾ.


ರೆಹಬ್ಬಾಮನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.


ಪಿತೃಗಳ ಬಳಿಗೆ ಸೇರಿದನು; ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.


ಅನಂತರ ದಾವೀದನು ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ಇವನ ಮಗನು ಆಹಾಜ್; ಇವನ ಮಗನು ಹಿಜ್ಕೀಯ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು