Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪು ಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:3
47 ತಿಳಿವುಗಳ ಹೋಲಿಕೆ  

ಆಮೇಲೆ ನಾನು ಲೇವಿಯರಿಗೆ - ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಲುಗಳನ್ನು ಕಾಯಬೇಕು ಎಂದು ಆಜ್ಞಾಪಿಸಿದೆನು. ನನ್ನ ದೇವರೇ ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿನ್ನ ಮಹಾಕೃಪೆಗನುಸಾರವಾಗಿ ನನ್ನನ್ನು ಕನಿಕರಿಸು.


ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು [ನಿನ್ನ ಪುಸ್ತಕದಿಂದ] ಅಳಿಸಿಬಿಡಬೇಡ.


ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನೂ ನನ್ನ ಹಿತಕ್ಕಾಗಿ ನೆನಪು ಮಾಡಿಕೋ.


ನೇವಿುತ ಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪು ಮಾಡಿಕೋ.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣಭಯಭಕ್ತಿಯುಳ್ಳವರಾಗಿ ಆತನ ವಿಧಿಗಳನ್ನು ಅನುಸರಿಸಿ ಆತನ ಆಜ್ಞೆಗಳನ್ನು ಕೈಕೊಳ್ಳಿರಿ ಎಂಬದೇ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ - ಇಗೋ ಇವನು ನಿಜವಾದ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.


ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು.


ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗಂದರು - ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?


ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಹೊಣೆಯಾಗು ಎಂದು ಮೇಲೆ ಮೇಲೆ ದೃಷ್ಟಿಸುತ್ತಾ ಕಂಗೆಟ್ಟೆನು.


ಯೆಹೋವನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.


ನಿನ್ನ ವಾಗ್ದಾನವನ್ನು ನಿನ್ನ ಸೇವಕನಿಗೋಸ್ಕರ ನೆನಪುಮಾಡಿಕೋ; ನನ್ನಲ್ಲಿ ನಿರೀಕ್ಷೆಯನ್ನು ಹುಟ್ಟಿಸಿದ್ದೀಯಲ್ಲಾ!


ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ವಿುಶ್ರವಾಯಿತು.


ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; ನಿನ್ನ ಅಭಿಷಿಕ್ತನನ್ನು ಹೆಜ್ಜೆಹೆಜ್ಜೆಗೂ ಅಪಮಾನ ಮಾಡುತ್ತಾರೆ.


ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ ಎಂಥಾ ವ್ಯರ್ಥಕ್ಕಾಗಿಯೇ ಮನುಷ್ಯರನ್ನು ನಿರ್ಮಿಸಿದ್ದೀ ಎಂದೂ ಜ್ಞಾಪಿಸಿಕೋ.


ಯೆಹೋವನು ಯಾವನ ಲೆಕ್ಕಕ್ಕೆ ಅಪರಾಧವನ್ನು ಎಣಿಸುವದಿಲ್ಲವೋ ಯಾವನ ಹೃದಯದಲ್ಲಿ ಕಪಟವಿರುವದಿಲ್ಲವೋ ಅವನು ಧನ್ಯನು.


ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ದ್ರೋಹಗಳನ್ನೂ ಮನಸ್ಸಿನಲ್ಲಿಡದೆ ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಸು.


ನಾನು ನರನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.


ಆಗ ಯೆಹೋವನು - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ ಎಂದು ಸೈತಾನನಿಗೆ ಹೇಳಿದನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ಇವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಯೆಹೋವನಿಗೆ ನಡೆದುಕೊಂಡನು.


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಯಥಾರ್ಥಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡಿಯಲಿಲ್ಲ.


ನಿನಗೆ ನಂಬಿಗಸ್ತನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾಕೃಪೆಯನ್ನು ತೋರಿಸಿದಿ; ಅವನ ಮೇಲೆ ಬಹಳವಾಗಿ ಕೃಪೆಮಾಡಿ ಈಗಿರುವಂತೆ ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಪೂರ್ತಿಗೊಳಿಸಿದಿ.


ಮತ್ತು ಯೆಹೋವನು - ನಿನ್ನ ಸಂತಾನದವರು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವದರಲ್ಲಿ ಜಾಗರೂಕರಾಗಿರುವದಾದರೆ ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.


ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡದ್ದರಿಂದ ಕಾಣದೆ ಹೋದನು.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರುಷ ಬದುಕಿದನು.


ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.


ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವದಾದರೆ


ಇದನ್ನು ಕೇಳಿದೊಡನೆ ಹಿಜ್ಕೀಯನು ಮೋರೆಯನ್ನು ಗೋಡೆಯ ಕಡೆಗೆ ತಿರುಗಿಸಿ -


ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವದಕ್ಕೆ ಮೊದಲು ಯೆಹೋವನು ಅವನಿಗೆ -


ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.


ನಿನ್ನ ಕೃಪೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.


ಇಸ್ರಾಯೇಲ್‍ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವನು.


ನಿನ್ನ ನಂಬಿಕೆಗೆ ನಿನ್ನ ಭಯಭಕ್ತಿಯೂ ನಿನ್ನ ನಿರೀಕ್ಷೆಗೆ ನಿನ್ನ ಸನ್ಮಾರ್ಗವೂ ಆಧಾರವಲ್ಲವೋ,


ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ;


ದುಃಖದಿಂದ ನನ್ನ ಕಣ್ಣು ಡೊಗರಾಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಮೊಬ್ಬಾಯಿತು.


ನಾನು ಬಿಟ್ಟುಹೋಗಿ ಇಲ್ಲವಾಗುವದಕ್ಕಿಂತ ಮುಂಚೆ ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.


ನನ್ನ ಯಾತ್ರಾನುಭವವನ್ನು ನಿನಗೆ ಹೇಳಿಕೊಂಡಾಗ ನನಗೆ ಸದುತ್ತರವನ್ನು ದಯಪಾಲಿಸಿದಿ; ನಿನ್ನ ನಿಬಂಧನೆಗಳನ್ನು ನನಗೆ ಉಪದೇಶಿಸು.


ಯೆಹೋವನು ಇಸ್ರಾಯೇಲ್ ವಂಶಕ್ಕೆ ಹೀಗೆ ನುಡಿಯುತ್ತಾನೆ - ನನ್ನನ್ನೇ ಆಶ್ರಯಿಸಿ ಬದುಕಿಕೊಳ್ಳಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು