Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:8 - ಕನ್ನಡ ಸತ್ಯವೇದವು J.V. (BSI)

8 ಹಿಜ್ಕೀಯನು ಯೆಶಾಯನನ್ನು - ಯೆಹೋವನು ನನ್ನನ್ನು ಗುಣಪಡಿಸುವನೆಂಬದಕ್ಕೂ ನಾನು ನಾಡದು ಆತನ ಆಲಯಕ್ಕೆ ಹೋಗುವೆನೆಂಬದಕ್ಕೂ ಗುರುತೇನು ಎಂದು ಕೇಳಿದ್ದಕ್ಕೆ ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ, ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ, ಇರುವ ಗುರುತು ಏನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಿಜ್ಕೀಯನು ಯೆಶಾಯನನ್ನು, “ಸರ್ವೇಶ್ವರ ನನ್ನನ್ನು ಗುಣಪಡಿಸುವರೆಂಬುದಕ್ಕೂ ನಾನು ಮೂರನೆ ದಿನ ಅವರ ಆಲಯಕ್ಕೆ ಹೋಗುವೆನೆಂಬುದಕ್ಕೂ ಗುರುತೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುತ್ತಾನೆಂಬುದಕ್ಕೆ ಮತ್ತು ಮೂರನೆಯ ದಿನ ನಾನು ದೇವಾಲಯದವರೆಗೆ ಹೋಗುವೆನೆಂಬುದಕ್ಕೆ ಏನು ಗುರುತು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಿಜ್ಕೀಯನು ಯೆಶಾಯನಿಗೆ, “ಯೆಹೋವ ದೇವರು ನನ್ನನ್ನು ಸ್ವಸ್ಥಮಾಡುವರೆಂಬುದಕ್ಕೆ ಮತ್ತು ನಾನು ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:8
14 ತಿಳಿವುಗಳ ಹೋಲಿಕೆ  

ಅವನು ಆತನಿಗೆ - ಸ್ವಾಮೀ, ದಯವಿರಲಿ; ನನ್ನೊಂದಿಗೆ ಮಾತಾಡುತ್ತಿರುವ ತಾವು ಸ್ವಾವಿುಯವರೇ ಆಗಿದ್ದೀರೆಂಬದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.


ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.


ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ನಾಡದು ನನ್ನ ಆಲಯಕ್ಕೆ ಬರುವಿ.


ಈ ಮಾತುಗಳು ನೆರವೇರುವವೆಂಬದಕ್ಕೆ ನೀವು ಈ ವರುಷದಲ್ಲಿ ಕೂಳೆ ಬೆಳೆಯನ್ನೂ ಮುಂದಿನ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮೂರನೆಯ ವರುಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ ದ್ರಾಕ್ಷೇತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವದೇ ಗುರುತಾಗಿರುವದು.


ಹಿಜ್ಕೀಯನು - ನಾನು [ಗುಣಹೊಂದಿ] ಯೆಹೋವನ ಆಲಯವನ್ನು ಸೇರುವೆನೆಂಬದಕ್ಕೆ ಗುರುತೇನು ಎಂದು ಕೇಳಿದ್ದನು).


ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಆತನು ನಿಮಗೆ ಗೊತ್ತಾಗುವದಕ್ಕೆ ಗುರುತೇನಂದರೆ - ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವದನ್ನು ಕಾಣುವಿರಿ ಎಂದು ಹೇಳಿದನು.


ಅದೇನಂದರೆ - ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು; ಒಬ್ಬನು ಫರಿಸಾಯನು, ಒಬ್ಬನು ಸುಂಕದವನು.


ಯೆಶಾಯನು ಒಂದು ಅಂಜೂರಹಣ್ಣಿನ ಉಂಡೆಯನ್ನು ತರಿಸಿ ಅದನ್ನು ಕುರುವಿನ ಮೇಲೆ ಇಡಿಸಿದಾಗ ಹಿಜ್ಕೀಯನು ಗುಣಹೊಂದಿದನು.


ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಯೆಹೋವನಿಂದ ಗುರುತು ಕೇಳುತ್ತೀ; ಹಾಗಾದರೆ ನೆರಳು ಹತ್ತು ಮೆಟ್ಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು ಅಂದನು.


(ಯೆಶಾಯನು - ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ ಕುರುವಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು ಎಂದು ಅಪ್ಪಣೆಕೊಡಲಾಗಿ


ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳುಕೊಳ್ಳುವದು ಹೇಗೆ ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು