Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:9 - ಕನ್ನಡ ಸತ್ಯವೇದವು J.V. (BSI)

9 ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಯೆಹೋವನಿಂದ ಗುರುತು ಕೇಳುತ್ತೀ; ಹಾಗಾದರೆ ನೆರಳು ಹತ್ತು ಮೆಟ್ಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಕ್ಕೆ ಯೆಶಾಯನು, “ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ? ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಸರ್ವೇಶ್ವರನಿಂದ ಗುರುತು ಕೇಳುತ್ತಿರುವೆ; ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಶಾಯನು, “ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ ಅಥವಾ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ? ನಿನಗೆ ಯಾವುದು ಬೇಕಾಗಿದೆ? ಯೆಹೋವನು ತಾನು ಹೇಳಿದ್ದನ್ನು ಮಾಡುತ್ತಾನೆಂಬುದಕ್ಕೆ ಇದೇ ನಿನಗೆ ಗುರುತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಶಾಯನು, “ಯೆಹೋವ ದೇವರು, ತಾವು ಹೇಳಿದ ಕಾರ್ಯವನ್ನು ಮಾಡುವರೆಂಬುದಕ್ಕೆ ಯೆಹೋವ ದೇವರ ಕಡೆಯಿಂದ ನಿನಗೆ ಉಂಟಾಗುವ ಗುರುತು, ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಬರಬೇಕೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:9
10 ತಿಳಿವುಗಳ ಹೋಲಿಕೆ  

ಈ ಮಾತುಗಳು ನೆರವೇರುವವೆಂಬದಕ್ಕೆ ನೀವು ಈ ವರುಷದಲ್ಲಿ ಕೂಳೆ ಬೆಳೆಯನ್ನೂ ಮುಂದಿನ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮೂರನೆಯ ವರುಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ ದ್ರಾಕ್ಷೇತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವದೇ ಗುರುತಾಗಿರುವದು.


ಹಿಜ್ಕೀಯನು ಯೆಶಾಯನನ್ನು - ಯೆಹೋವನು ನನ್ನನ್ನು ಗುಣಪಡಿಸುವನೆಂಬದಕ್ಕೂ ನಾನು ನಾಡದು ಆತನ ಆಲಯಕ್ಕೆ ಹೋಗುವೆನೆಂಬದಕ್ಕೂ ಗುರುತೇನು ಎಂದು ಕೇಳಿದ್ದಕ್ಕೆ ಅವನು -


ಹಿಜ್ಕೀಯನು - ನೆರಳು ಮುಂದೆ ಹೋಗುವದು ಸುಲಭ; ಆದದರಿಂದ ಹತ್ತು ಮೆಟ್ಲು ಹಿಂದೆ ಬರುವಂತೆ ಮಾಡು ಎಂದು ಹೇಳಿದನು.


ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ - ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆಮಾಡು; ಏಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಿಗೆ ಒಂದು ವಿಜ್ಞಾಪನೆ ಮಾಡಿದನು. ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನಿಲ್ಲಿರಿ! ಎಂದು ಇಸ್ರಾಯೇಲ್ಯರ ಸಮಕ್ಷದಲ್ಲಿ ಆಜ್ಞಾಪಿಸಲು


ಅದರೆ ಅವರು - ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ ಎಂದು ನಮ್ಮನ್ನು ಕರೆದರೆ ಯೆಹೋವನು ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾನೆಂಬದಕ್ಕೆ ಇದೇ ಗುರುತೆಂದು ತಿಳಿದು ಮೇಲೆ ಹೋಗೋಣ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು