Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:21 - ಕನ್ನಡ ಸತ್ಯವೇದವು J.V. (BSI)

21 ತನ್ನ ಪೂರ್ವಿಕರ ದೇವರಾದ ಯೆಹೋವನನ್ನೂ ಆತನು ಮೆಚ್ಚುವ ಮಾರ್ಗವನ್ನೂ ಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ತನ್ನ ಪೂರ್ವಜರ ದೇವರಾದ ಸರ್ವೇಶ್ವರನನ್ನೂ ಅವರು ಮೆಚ್ಚುವ ಮಾರ್ಗವನ್ನೂ ಬಿಟ್ಟು ತನ್ನ ತಂದೆಯ ಮಾರ್ಗದಲ್ಲೇ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಮೋನನು ತನ್ನ ತಂದೆಯಂತೆ ಜೀವಿಸಿದ್ದನು. ತನ್ನ ತಂದೆಯು ಪೂಜಿಸಿದ ವಿಗ್ರಹಗಳನ್ನು ಆಮೋನನು ಪೂಜಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ತನ್ನ ಪಿತೃಗಳ ದೇವರಾದ ಯೆಹೋವ ದೇವರ ಮಾರ್ಗವನ್ನು ಬಿಟ್ಟುಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:21
8 ತಿಳಿವುಗಳ ಹೋಲಿಕೆ  

ಯೆಹೂದ್ಯರ ಅರಸನಾದ ಮನಸ್ಸೆಯು ಮುಂಚೆ ಇದ್ದ ಅಮೋರಿಯರ ಕೃತ್ಯಗಳಿಗಿಂತ ಅಸಹ್ಯವಾದ ಕೃತ್ಯಗಳನ್ನು ನಡಿಸಿದದರಿಂದಲೂ ವಿಗ್ರಹಗಳಿಂದ ಯೆಹೂದ್ಯರನ್ನು ಪಾಪಕ್ಕೆ ಪ್ರೇರಿಸಿದದರಿಂದಲೂ


ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.


ಇದಲ್ಲದೆ ಅವನು ಸತ್ತವರಲ್ಲಿ ವಿಚಾರಿಸುವವರನ್ನೂ ಬೈತಾಳಿಕರನ್ನೂ ಯೆರೂಸಲೇಮ್ ಯೆಹೂದಪ್ರಾಂತ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.


ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಇದಲ್ಲದೆ ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್‍ಹಳ್ಳದಲ್ಲಿ ಹಾಕಿಸಿದನು.


ಇವನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ತನ್ನ ತಂದೆಯಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು