Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:3 - ಕನ್ನಡ ಸತ್ಯವೇದವು J.V. (BSI)

3 ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಾನಗಳನ್ನು ತಿರಿಗಿ ಸ್ಥಾಪಿಸಿ ಇಸ್ರಾಯೇಲ್ಯರ ಅರಸನಾದ ಅಹಾಬನಂತೆ ಬಾಳನಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ ಇಸ್ರಯೇಲರ ಅರಸನಾದ ಅಹಾಬನಂತೆ ಬಾಳ್ ದೇವತೆಗಾಗಿ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು, ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮನಸ್ಸೆಯು ತನ್ನ ತಂದೆಯಾದ ಹಿಜ್ಕೀಯನು ನಾಶಪಡಿಸಿದ್ದ ಉನ್ನತಸ್ಥಳಗಳನ್ನು ಮತ್ತೆ ನಿರ್ಮಿಸಿದನು. ಮನಸ್ಸೆಯು ಇಸ್ರೇಲಿನ ರಾಜನಾದ ಅಹಾಬನಂತೆ ಬಾಳನಿಗಾಗಿ ಯಜ್ಞವೇದಿಕೆಯನ್ನು ಮತ್ತು ಅಶೇರಸ್ತಂಭಗಳನ್ನು ನಿರ್ಮಿಸಿದನು. ಮನಸ್ಸೆಯು ಪರಲೋಕದ ನಕ್ಷತ್ರಗಳನ್ನು ಆರಾಧಿಸಿ ಅವುಗಳ ಸೇವೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:3
23 ತಿಳಿವುಗಳ ಹೋಲಿಕೆ  

ಪೂಜಾಸ್ಥಳಗಳನ್ನು ಹಾಳುಮಾಡಿ ಕಲ್ಲುಕಂಬಗಳನ್ನು ಒಡೆದು ಅಶೇರವಿಗ್ರಹ ಸ್ತಂಭಗಳನ್ನು ಕಡಿದುಹಾಕಿದನು; ಮೋಶೆಯು ಮಾಡಿಸಿದ ತಾಮ್ರಸರ್ಪವನ್ನು ಚೂರು ಚೂರು ಮಾಡಿದನು. ಇಸ್ರಾಯೇಲ್ಯರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ನೆಹುಷ್ಟಾನ್ ಎಂಬ ಹೆಸರಿತ್ತು;


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವಮೂರ್ತಿಗಳು, ಅಶೇರವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು; ಆಕಾಶಸೈನ್ಯ ಬಾಳ್‍ದೇವತೆ ಇವುಗಳನ್ನು ಪೂಜಿಸಿದರು;


ಅನ್ಯದೇವರುಗಳನ್ನಾಗಲಿ ಇಲ್ಲವೆ ಪೂಜಿಸಬಾರದೆಂದು ಆತನು ನಿಷೇಧಿಸಿರುವ ಸೂರ್ಯಚಂದ್ರನಕ್ಷತ್ರಗಳನ್ನಾಗಲಿ ಸೇವಿಸಿ ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ದುಷ್ಟವಾದದ್ದನ್ನು ನಡಿಸಿದರೆ


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶ ಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂಬಾರದು ನಮಸ್ಕರಿಸಲೂಬಾರದು.


ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.


ಸೂರ್ಯನು ಪ್ರಕಾಶಿಸುವದನ್ನಾಗಲಿ ಚಂದ್ರನು ಕಳೆದುಂಬಿದವನಾಗಿ ಚರಿಸುವದನ್ನಾಗಲಿ ನಾನು ನೋಡಿದಾಗ


ಅವನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರುಷ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಇದ್ದ ಪೂಜಾಸ್ಥಳಗಳನ್ನೂ ಅಶೇರ ಸ್ತಂಭಗಳನ್ನೂ ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಪಡಿಸಿದನು.


ಆ ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆತನ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!


ಒಂದು ವೇಳೆ ನೀವು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಯೆರೂಸಲೇವಿುನ ಯಜ್ಞವೇದಿಯ ಮುಂದೆಯೇ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!


ಇವನಿಗೂ ಅಹಾಬನ ಕುಟುಂಬದವರಿಗೂ ಬೀಗತನವಿದ್ದದರಿಂದ ಇವನು ಅವರ ಮಾರ್ಗದಲ್ಲೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಅವರು ತರಲ್ಪಟ್ಟ ಹೋರಿಗಳಲ್ಲೊಂದನ್ನು ತೆಗೆದುಕೊಂಡು ಸಿದ್ಧಪಡಿಸಿ ತಮ್ಮ ದೇವರಾದ ಬಾಳನ ಹೆಸರು ಹೇಳಿ - ಬಾಳನೇ, ನಮಗೆ ಕಿವಿಗೊಡು ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ; ಅವರು ವೇದಿಯ ಸುತ್ತಲು ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.


ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ - ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವದನ್ನು ಕಂಡು


ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ ಯಾವ ವಿಧವಾದ ಮರದ ಅಶೇರವೆಂಬ ವಿಗ್ರಹ ಸ್ತಂಭವನ್ನೂ ನೆಡಬಾರದು;


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ


ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧಾಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾದೀರಿ.


ಯೆಹೋವನು ಹೀಗನ್ನುತ್ತಾನೆ - ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡಿಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.


ಆದರೂ ಅವರು ತಮ್ಮನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು; ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರವಿಗ್ರಹಸ್ತಂಭವು ಇದ್ದೇ ಇತ್ತು.)


ಆದರೆ ಯೆಹೋವನಾದ ನನ್ನನ್ನು ತೊರೆದು ನನ್ನ ಪವಿತ್ರಪರ್ವತವನ್ನು ಮರೆತು ಶುಭದಾಯಕದೇವತೆಗೆ ಔತಣವನ್ನು ಅಣಿಮಾಡಿ ಗತಿದಾಯಕದೇವತೆಗೆ ಮದ್ಯವನ್ನು ತುಂಬಾ ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು