Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:11 - ಕನ್ನಡ ಸತ್ಯವೇದವು J.V. (BSI)

11 ಅರಸನು ಧರ್ಮೋಪದೇಶಗ್ರಂಥವಾಕ್ಯಗಳನ್ನು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅರಸನು ಧರ್ಮೋಪದೇಶ ಗ್ರಂಥವಾಕ್ಯಗಳನ್ನು ಕೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ರಾಜನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ, ಗಲಿಬಿಲಿಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅರಸನು ಮೋಶೆಯ ನಿಯಮದ ಪುಸ್ತಕದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:11
12 ತಿಳಿವುಗಳ ಹೋಲಿಕೆ  

ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡು


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು ನಿಮ್ಮ ದೇವರಾದ ಯೆಹೋವನ ಕಡೆಗೆ ತಿರಿಗಿಕೊಳ್ಳಿರಿ; ಆತನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳವನಾಗಿ ಮಾಡಬೇಕೆಂದಿದ್ದ ಕೇಡಿಗೆ ಮನಮರುಗುತ್ತಾನೆ.


ಅರಸನಾಗಲಿ ಸುರಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.


ನಾನು ಈ ದೇಶವನ್ನೂ ನಿವಾಸಿಗಳನ್ನೂ ಶಾಪ ವಿಸ್ಮಯಗಳಿಗೆ ಗುರಿಮಾಡುವೆನೆಂಬದನ್ನು ನೀನು ಕೇಳಿದಾಗ ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಆಗ ಯೆಹೋಶುವನೂ ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿದ್ದರು.


ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿನ ಮೇಲೆ ಗೋಣೀತಟ್ಟು ಸುತ್ತಿಕೊಂಡು ತನ್ನ ಮಗನಿಗಾಗಿ ಬಹುದಿನಗಳವರೆಗೂ ಹಂಬಲಿಸುತ್ತಿದ್ದನು.


ಇದಲ್ಲದೆ ಯಾಜಕನಾದ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.


ಯೆಹೋವನು ಇಂತೆನ್ನುತ್ತಾನೆ - ಯೆಹೂದವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿ ಆತನ ವಿಧಿಗಳನ್ನು ಕೈಕೊಳ್ಳದೆ ಅವರ ಪಿತೃಗಳು ಹಿಂಬಾಲಿಸಿದ ಸುಳ್ಳುದೇವತೆಗಳ ಮೂಲಕ ಸನ್ಮಾರ್ಗವನ್ನು ತಪ್ಪಿದರಷ್ಟೆ;


ನಿನ್ನ ಭಯದಿಂದ ನನ್ನ ಮಾಂಸವು ಕಂಪಿಸುತ್ತದೆ; ನಿನ್ನ ವಿಧಿಗಳಿಗೆ ಅಂಜಿಕೊಂಡಿದ್ದೇನೆ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಬ್ಬರಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇ ಬೇಕು ಎಂದು ಬಾರೂಕನಿಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು