2 ಅರಸುಗಳು 22:19 - ಕನ್ನಡ ಸತ್ಯವೇದವು J.V. (BSI)19 ನಾನು ಈ ದೇಶವನ್ನೂ ನಿವಾಸಿಗಳನ್ನೂ ಶಾಪ ವಿಸ್ಮಯಗಳಿಗೆ ಗುರಿಮಾಡುವೆನೆಂಬದನ್ನು ನೀನು ಕೇಳಿದಾಗ ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ‘ನಾನು ಈ ದೇಶವನ್ನೂ, ನಿವಾಸಿಗಳನ್ನೂ, ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುವುದನ್ನು ನೀನು ಕೇಳಿದಾಗ, ದುಃಖಪಟ್ಟು ಯೆಹೋವನಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ‘ನಾನು ಈ ನಾಡನ್ನೂ ನಿವಾಸಿಗಳನ್ನೂ ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುದನ್ನು ನೀನು ಕೇಳಿದಾಗ, ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಈ ಸ್ಥಳವೂ ಅದರ ನಿವಾಸಿಗಳೂ ನಾಶಕ್ಕೂ ಶಾಪಕ್ಕೂ ಗುರಿಯಾಗುವರೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ ನೀನು ನಿನ್ನನ್ನು ಯೆಹೋವ ದೇವರ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ ನಾನು ನಿನ್ನ ಮೊರೆಯನ್ನು ಕೇಳಿದೆನು. ಅಧ್ಯಾಯವನ್ನು ನೋಡಿ |