2 ಅರಸುಗಳು 23:19 - ಕನ್ನಡ ಸತ್ಯವೇದವು J.V. (BSI)19 ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಕಟ್ಟಿಸಿದಂಥ ಯೆಹೋವನ ಕೋಪಕ್ಕೆ ಕಾರಣವಾಗಿದ್ದಂಥ ಪೂಜಾಸ್ಥಳಗಳ ಗುಡಿಗಳಿಗೆ ಬೇತೇಲಿಗಾದ ಗತಿಯೇ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಪೂಜಾಸ್ಥಳಗಳನ್ನು ಗುಡಿಗಳನ್ನು ಕಟ್ಟಿಸಿ, ಯೆಹೋವನ ಕೋಪಕ್ಕೆ ಕಾರಣವಾದಂಥವುಗಳನ್ನು ಯೋಷೀಯನು ತೆಗೆದುಕೊಂಡು, ಬೇತೇಲಿನಲ್ಲಿ ನಾಶಮಾಡಿದ ಹಾಗೆ ಅವೆಲ್ಲವನ್ನು ನಾಶಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇಸ್ರಯೇಲ್ ರಾಜರು ಸಮಾರಿಯ ಪಟ್ಟಣಗಳಲ್ಲಿ ಕಟ್ಟಿಸಿದಂಥ ಹಾಗು ಸರ್ವೇಶ್ವರನ ಕೋಪಕ್ಕೆ ಕಾರಣವಾಗಿದ್ದಂಥ ಪೂಜಾಸ್ಥಳಗಳಲ್ಲಿದ್ದ ಗುಡಿಗಳಿಗೆ ಬೇತೇಲಿಗಾದ ಗತಿಯೇ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೋಷೀಯನು ಸಮಾರ್ಯದ ನಗರಗಳಲ್ಲಿದ್ದ ಉನ್ನತಸ್ಥಳಗಳ ಆಲಯಗಳನ್ನೆಲ್ಲ ನಾಶಗೊಳಿಸಿದನು. ಇಸ್ರೇಲಿನ ರಾಜರುಗಳು ಈ ಆಲಯಗಳನ್ನು ನಿರ್ಮಿಸಿದ್ದರು. ಇದರಿಂದ ಯೆಹೋವನು ಬಹಳ ಕೋಪಗೊಂಡಿದ್ದನು. ಯೋಷೀಯನು ಬೇತೇಲಿನಲ್ಲಿ ಆರಾಧನೆಯ ಸ್ಥಳಗಳನ್ನು ನಾಶಪಡಿಸಿದಂತೆ ಆ ಆಲಯಗಳನ್ನೂ ನಾಶಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇಸ್ರಾಯೇಲಿನ ಅರಸರು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ ಯೆಹೋವ ದೇವರ ಕೋಪಕ್ಕೆ ಕಾರಣವಾಗಿದ್ದ ಉನ್ನತ ಪೂಜಾಸ್ಥಳಗಳನ್ನು ಯೋಷೀಯನು ಕೆಡವಿಹಾಕಿ, ಬೇತೇಲಿನಲ್ಲಿ ತಾನು ಮಾಡಿದಂತೆ ಅವುಗಳಿಗೆ ಮಾಡಿದನು. ಅಧ್ಯಾಯವನ್ನು ನೋಡಿ |
ಇದಾದನಂತರ ನೆರೆದುಬಂದ ಇಸ್ರಾಯೇಲ್ಯರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು ಅಶೇರವಿಗ್ರಹಸ್ತಂಭಗಳನ್ನು ಕಡಿದುಹಾಕಿ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಲ್ಲದೆ ಎಫ್ರಾಯೀಮ್ ಮನಸ್ಸೆ ಪ್ರಾಂತಗಳಲ್ಲಿಯೂ ಯಾವದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.