2 ಅರಸುಗಳು 23:25 - ಕನ್ನಡ ಸತ್ಯವೇದವು J.V. (BSI)25 ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಮುಂಚೆಯೂ ತರುವಾಯವೂ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಹಿಂದಿನ ಕಾಲದಲ್ಲೂ ಆ ನಂತರದ ಕಾಲದಲ್ಲೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸರ್ವೇಶ್ವರನಿಗೆ ಅಭಿಮುಖನಾಗಿ, ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಈ ಯೋಷೀಯನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಇದಕ್ಕೆ ಮೊದಲು ಯೋಷೀಯನಂತಹ ರಾಜನು ಇರಲೇ ಇಲ್ಲ. ಯೋಷೀಯನು ತನ್ನ ಪೂರ್ಣ ಹೃದಯದಿಂದಲೂ ತನ್ನ ಪೂರ್ಣ ಆತ್ಮದಿಂದಲೂ ತನ್ನ ಪೂರ್ಣ ಶಕ್ತಿಯಿಂದಲೂ ಯೆಹೋವನ ಕಡೆಗೆ ತಿರುಗಿದನು. ಮೋಶೆಯ ಧರ್ಮಶಾಸ್ತ್ರವನ್ನು ಯೋಷೀಯನಂತೆ ಬೇರೆ ಯಾವ ರಾಜನೂ ಅನುಸರಿಸಿರಲಿಲ್ಲ. ಆ ಕಾಲದವರೆಗೆ ಯೋಷೀಯನಂತಹ ಮತ್ತೊಬ್ಬ ರಾಜನು ಇರಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ತನ್ನ ಪೂರ್ಣಹೃದಯದಿಂದಲೂ, ತನ್ನ ಪೂರ್ಣಪ್ರಾಣದಿಂದಲೂ, ತನ್ನ ಪೂರ್ಣ ಬಲದಿಂದಲೂ ಮೋಶೆಯ ಸಮಸ್ತ ನಿಯಮದ ಪ್ರಕಾರ ಯೆಹೋವ ದೇವರ ಕಡೆಗೆ ತಿರುಗಿಕೊಂಡ ಯೋಷೀಯ ಅರಸನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ. ಅಧ್ಯಾಯವನ್ನು ನೋಡಿ |