Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:26 - ಕನ್ನಡ ಸತ್ಯವೇದವು J.V. (BSI)

26 ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆದರೂ ಮನಸ್ಸೆಯ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲಿದ್ದ ಸರ್ವೇಶ್ವರನ ಉಗ್ರಕೋಪ ಇಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ಯೆಹೋವನು ಯೆಹೂದದ ಜನರ ಮೇಲೆ ಕೋಪಗೊಳ್ಳುವುದನ್ನು ನಿಲ್ಲಿಸಲೇ ಇಲ್ಲ. ಮನಸ್ಸೆಯು ಮಾಡಿದ ಕಾರ್ಯಗಳೆಲ್ಲವುಗಳಿಂದ ಯೆಹೋವನು ಅವರ ಮೇಲೆ ಇನ್ನೂ ಕೋಪಗೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೂ ಮನಸ್ಸೆಯು ಮಾಡಿದ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲೆ ಯೆಹೋವ ದೇವರ ಕೋಪವು ಇನ್ನೂ ನೆಲೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:26
13 ತಿಳಿವುಗಳ ಹೋಲಿಕೆ  

ಅವುಗಳಿಗಾಗಿ ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದದರಿಂದ ಆತನ ಅಪ್ಪಣೆಯ ಪ್ರಕಾರ ಈ ಶಿಕ್ಷೆಯು ಅವರಿಗೆ ಆಯಿತು.


ಅವರು ದೇವಪ್ರೇಷಿತರನ್ನು ಗೇಲಿಮಾಡಿ ಆತನ ಮಾತುಗಳನ್ನು ತುಚ್ಫೀಕರಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ ಆತನ ಕೋಪಾಗ್ನಿಯು ಆತನ ಪ್ರಜೆಯ ಮೇಲೆ ಉರಿಯಹತ್ತಿತು, ಅದರ ತಾಪವು ಆರಿಹೋಗಲೇ ಇಲ್ಲ.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಪ್ರಕಾರ ಯೆಹೂದರಾಜ್ಯವನ್ನು ಹಾಳುಮಾಡುವದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಕಳುಹಿಸಿದನು.


ಯೆರೂಸಲೇಮನ್ನು ನಿರಪರಾಧರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷವಿುಸದೆ ಹೋದನು;


ಯೆಹೋವನು ಯೆರೂಸಲೇವಿುನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರೋಧವಾಗಿ ತಿರುಗಿಬಿದ್ದದರಿಂದ ಅವನು ಚಿದ್ಕೀಯನ ಆಳಿಕೆಯ.


ಆದದರಿಂದ ನಮ್ಮ ಪ್ರಭುಗಳು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆ ಮಾಡಿಕೊಂಡವರೆಲ್ಲರೂ ನೇವಿುತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ ಎಂದು ಉತ್ತರಕೊಟ್ಟರು.


ಯೆಹೋವನು ತನ್ನ ಹೃದಯಾಲೋಚನೆಗಳನ್ನು ನಡಿಸಿ ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.


ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆಯೂ ಅವುಗಳನ್ನು ಕೈಕೊಳ್ಳದೆಯೂ ಹೋದದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದದರಿಂದ ನೀವು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.


ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಐಗುಪ್ತದ ಅರಸನಾದ ನೆಕೋ ಎಂಬವನು ಯುದ್ಧಮಾಡುವದಕ್ಕೋಸ್ಕರ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು