2 ಅರಸುಗಳು 23:29 - ಕನ್ನಡ ಸತ್ಯವೇದವು J.V. (BSI)29 ಅವನ ಕಾಲದಲ್ಲಿ ಐಗುಪ್ತದ ಅರಸನಾದ ಫರೋಹ ನೆಕೋ ಎಂಬವನು ಅಶ್ಶೂರದ ಅರಸನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೋಸ್ಕರ ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಕೂಡಲೆ ಅವನಿಂದ ಹತನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವನ ಕಾಲದಲ್ಲಿ, ಐಗುಪ್ತದ ಅರಸನಾದ ಫರೋಹ ನೆಕೋ ಎಂಬುವವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ಎದ್ದು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಅಲ್ಲಿ ಅವನಿಂದ ಹತನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ವಿರುದ್ಧ ಯುದ್ಧಮಾಡುವುದಕ್ಕಾಗಿ ಯೂಫ್ರಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು, ಕೂಡಲೆ ಅವನಿಂದ ಹತನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೋಷೀಯನ ಕಾಲದಲ್ಲಿ ಈಜಿಪ್ಟಿನ ರಾಜನಾದ ಫರೋಹ-ನೆಕೋ ಎಂಬವನು ಅಶ್ಶೂರದ ರಾಜನ ವಿರುದ್ಧವಾಗಿ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ರಾಜನಾದ ಯೋಷೀಯನು ಫರೋಹ ನೆಕೋವನ ವಿರುದ್ಧ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಆದರೆ ಮೆಗಿದ್ದೋವಿನಲ್ಲಿ ಫರೋಹ ನೆಕೋವನು ಯೋಷೀಯನನ್ನು ನೋಡಿ, ಅವನನ್ನು ಕೊಂದು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ಸಹಾಯಮಾಡಲು ಯೂಫ್ರೇಟೀಸ್ ನದಿಯವರೆಗೆ ಹೋದನು. ಅರಸನಾದ ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದಾಗ, ನೆಕೋ ಅವನನ್ನು ಎದುರಿಸಿ ಮೆಗಿದ್ದೋವಿನಲ್ಲಿ ಕೊಂದುಹಾಕಿದನು. ಅಧ್ಯಾಯವನ್ನು ನೋಡಿ |