Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:31 - ಕನ್ನಡ ಸತ್ಯವೇದವು J.V. (BSI)

31 ಯೆಹೋವಾಹಾಜನು ಅರಸನಾದಾಗ ಇಪ್ಪತ್ತ ಮೂರು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಮೂರು ತಿಂಗಳು ಆಳಿದನು. ಲಿಬ್ನದವಳೂ ಯೆರೆಮೀಯನ ಮಗಳೂ ಅದ ಹಮೂಟಲ್ ಎಂಬಾಕೆಯು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ನದವನಾದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯೆಹೋವಾಹಾಜನು ಅರಸನಾದಾಗ ಅವನಿಗೆ ಇಪ್ಪತ್ತಮೂರು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಲಿಬ್ನದವಳೂ ಯೆರೆಮೀಯನ ಮಗಳೂ ಆದ ಹಮೂಟಲ್ ಎಂಬಾಕೆ ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವಾಹಾಜನು ರಾಜನಾದಾಗ ಅವನಿಗೆ ಇಪ್ಪತ್ತಮೂರು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬ ಹೆಸರಿನವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೆಹೋವಾಹಾಜನು ಅರಸನಾದಾಗ ಇಪ್ಪತ್ತಮೂರು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಊರಿನ ಯೆರೆಮೀಯನ ಮಗಳಾದ ಹಮೂಟಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:31
5 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಯೋಷೀಯನ ಮಗನೂ ತನ್ನ ತಂದೆಯಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವದೇನಂದರೆ - ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು;


ಯೋಷೀಯನ ಮಕ್ಕಳು - ಚೊಚ್ಚಲನು ಯೋಹಾನಾನ್; ಎರಡನೆಯವನು ಯೆಹೋಯಾಕೀಮ್; ಮೂರನೆಯವನು ಚಿದ್ಕೀಯ; ನಾಲ್ಕನೆಯವನು ಶಲ್ಲೂಮ್.


ಚಿದ್ಕೀಯನು ತನ್ನ ಇಪ್ಪತ್ತೊಂದನೆಯ ವರುಷ ತುಂಬಿದ ಮೇಲೆ ಅರಸನಾಗಿ ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಲಿಬ್ನದವಳೂ ಯೆರೆವಿುಯಾನ ಮಗಳೂ ಆದ ಹಮೂಟಲ್ ಎಂಬಾಕೆಯು ಇವನ ತಾಯಿ.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರುಷದವನಾಗಿದ್ದನು. ಇವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.


ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ತೆಗೆದುಕೊಂಡು ಅವನ ತಂದೆಗೆ ಬದಲಾಗಿ ಯೆರೂಸಲೇವಿುನಲ್ಲಿ ಅರಸನನ್ನಾಗಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು