2 ಅರಸುಗಳು 23:33 - ಕನ್ನಡ ಸತ್ಯವೇದವು J.V. (BSI)33 ಫರೋಹ ನೆಕೋವನು ಇವನನ್ನು ಯೆರೂಸಲೇವಿುನಲ್ಲಿ ಬಹು ದಿವಸಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಫರೋಹ ನೆಕೋವನು ಇವನನ್ನು ಜೆರುಸಲೇಮಿನಲ್ಲಿ ಬಹುದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ದಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಫರೋಹ ನೆಕೋವನು ಹಮಾತ್ ದೇಶದ ರಿಬ್ಲಾ ಎಂಬಲ್ಲಿ ಯೆಹೋವಾಹಾಜನನ್ನು ಸೆರೆಹಿಡಿದನು. ಆದ್ದರಿಂದ ಯೆಹೋವಾಹಾಜನು ಜೆರುಸಲೇಮಿನಲ್ಲಿ ಆಳಲಿಲ್ಲ. ಫರೋಹ ನೆಕೋವನು ಮೂರುಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿಯನ್ನು ಮತ್ತು ಮೂವತ್ನಾಲ್ಕು ಕಿಲೋಗ್ರಾಂ ಚಿನ್ನವನ್ನು ಕೊಡುವಂತೆ ಯೆಹೂದದವರನ್ನು ಬಲವಂತಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದರೆ ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಆಳದ ಹಾಗೆ ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಬಂಧಿಸಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು. ಅಧ್ಯಾಯವನ್ನು ನೋಡಿ |