Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:1 - ಕನ್ನಡ ಸತ್ಯವೇದವು J.V. (BSI)

1 ಅವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದನು; ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರುಷಗಳಾದನಂತರ ಅವನಿಗೆ ವಿರೋಧವಾಗಿ ತಿರುಗಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನಿಗೆ ವಿರುದ್ಧ ದಂಗೆಯೆದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋಯಾಕೀಮನ ಕಾಲದಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶಕ್ಕೆ ಬಂದನು. ಯೆಹೋಯಾಕೀಮನು ಮೂರು ವರ್ಷಗಳವರೆಗೆ ನೆಬೂಕದ್ನೆಚ್ಚರನ ಸೇವೆಮಾಡಿದನು. ನಂತರ ಯೆಹೋಯಾಕೀಮನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದು ಅವನ ಆಳ್ವಿಕೆಯಿಂದ ದೂರವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋಯಾಕೀಮನ ಆಳಿಕೆಯಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶವನ್ನು ದಾಳಿಮಾಡಿದನು. ಯೆಹೋಯಾಕೀಮನು ಮೂರು ವರ್ಷ ಅವನ ಸೇವಕನಾಗಿದ್ದು, ತರುವಾಯ ಅವನ ಮೇಲೆ ತಿರುಗಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:1
19 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಯೆಹೋಯಾಕೀಮನ ಆಳಿಕೆಯ ಮೂರನೆಯ ವರುಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇವಿುಗೆ ಬಂದು ಮುತ್ತಿಗೆ ಹಾಕಿದನು.


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಐಗುಪ್ತವನ್ನು ಕುರಿತದ್ದು. ಐಗುಪ್ತದ ಅರಸನಾದ ಫರೋಹನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ.


ಇದಲ್ಲದೆ ಅವನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರುಷಗಳವರೆಗೂ ಅದಕ್ಕೆ ಮುತ್ತಿಗೆಹಾಕಿದನು.


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ -


ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ - ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇವಿುಗೆ ಹೋಗೋಣ ಬನ್ನಿ ಅಂದುಕೊಂಡು ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದೇವೆ ಎಂದು ಹೇಳಿದರು.


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ


ಇಸ್ರಾಯೇಲು ಚದರಿಹೋದ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ನರಪುತ್ರನೇ, ನೀನು ದೈವಸಂಕಲ್ಪವನ್ನು ಸಾರಿ ಚಪ್ಪಾಳೆಬಡಿ; ಖಡ್ಗವು ಎರಡರಷ್ಟು ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ ಅಧಿಪತಿಯನ್ನು ಹತಿಸುವ ಖಡ್ಗ!


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.


ಯೆಹೋವನು ಯೆರೂಸಲೇವಿುನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರೋಧವಾಗಿ ತಿರುಗಿಬಿದ್ದದರಿಂದ ಅವನು ಚಿದ್ಕೀಯನ ಆಳಿಕೆಯ.


ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ತೆಗೆದುಕೊಂಡು ಅವನ ತಂದೆಗೆ ಬದಲಾಗಿ ಯೆರೂಸಲೇವಿುನಲ್ಲಿ ಅರಸನನ್ನಾಗಿ ಮಾಡಿದರು.


ಅದಾಗಿ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರ ಮಾಡಿದ್ದಾರೆ ಎಂಬದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.


ಯುದ್ಧಕ್ಕೆ ಬೇಕಾದ ವಿವೇಕವೂ ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿಮಾತೇ ಎಂದು ನಾನು ಹೇಳಬಲ್ಲೆ. ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದೀ?


ಆಗ ಜನಾಂಗಗಳು ಸುತ್ತಲಿನ ರಾಷ್ಟ್ರಗಳಿಂದ ಕೂಡಿಬಂದು ಅದಕ್ಕೆ ವಿರುದ್ಧವಾಗಿ ನಿಂತು ಬಲೆಯೊಡ್ಡಿ ಗುಂಡಿತೋಡಲು ಅಲ್ಲಿ ಸಿಕ್ಕಿಬಿದ್ದಿತು.


ಇಗೋ, ತೀಕ್ಷ್ಣವೂ ತೀವ್ರವೂ ಆದ ಕಸ್ದೀಯ ಜನಾಂಗವನ್ನು ಎಬ್ಬಿಸುತ್ತಿದ್ದೇನೆ; ಆ ಜನರು ತಮ್ಮದಲ್ಲದ ಸಂಸ್ಥಾನಗಳನ್ನು ವಶಮಾಡಿಕೊಳ್ಳುವ ಹಾಗೆ ಲೋಕದಲ್ಲೆಲ್ಲಾ ಸಂಚರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು