2 ಅರಸುಗಳು 24:13 - ಕನ್ನಡ ಸತ್ಯವೇದವು J.V. (BSI)13 ಇದಲ್ಲದೆ ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ದ್ರವ್ಯವನ್ನು ತೆಗೆದುಕೊಂಡುಹೋದನು. ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಲ್ಲಿದ್ದ ಭಂಡಾರವನ್ನೆಲ್ಲಾ ಮತ್ತು ರಾಜನ ಅರಮನೆಯಲ್ಲಿದ್ದ ಭಂಡಾರವನ್ನೆಲ್ಲಾ ತೆಗೆದುಕೊಂಡು ಹೋದನು. ಇಸ್ರೇಲರ ರಾಜನಾದ ಸೊಲೊಮೋನನು ದೇವಾಲಯದಲ್ಲಿಟ್ಟಿದ್ದ ಬಂಗಾರವನ್ನೆಲ್ಲಾ ನೆಬೂಕದ್ನೆಚ್ಚರನು ತೆಗೆದುಕೊಂಡನು. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರು ಮುಂತಿಳಿಸಿದ ಪ್ರಕಾರವೇ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದಲ್ಲಿ ಸಮಸ್ತ ಬೊಕ್ಕಸಗಳನ್ನೂ, ಅರಮನೆಯ ಬೊಕ್ಕಸಗಳನ್ನೂ, ಇಸ್ರಾಯೇಲಿನ ಅರಸನಾದ ಸೊಲೊಮೋನನು ಅರಸನ ಆಲಯದಲ್ಲಿ ಮಾಡಿದ ಬಂಗಾರದ ಸಮಸ್ತ ಪಾತ್ರೆಗಳನ್ನೂ ಸೂರೆಯಾಗಿ ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |