Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:15 - ಕನ್ನಡ ಸತ್ಯವೇದವು J.V. (BSI)

15 ಅವನು ಯೆಹೋಯಾಖೀನನನ್ನೂ ಅವನ ತಾಯಿ ಹೆಂಡತಿಯರು ಕಂಚುಕಿಗಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀನನನ್ನೂ, ಅವನ ತಾಯಿ, ಹೆಂಡತಿ, ಕಂಚುಕಿಗಳನ್ನೂ ಮತ್ತು ದೇಶದ ಪ್ರಧಾನ ಪುರುಷರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ತೆಗೆದುಕೊಂಡುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನು ಯೆಹೋಯಾಖೀನನ್ನೂ ಅವನ ತಾಯಿ, ಹೆಂಡತಿಯರು, ಕಂಚುಕಿಗಳನ್ನೂ ನಾಡಿನ ಪ್ರಧಾನ ಪುರುಷರು ಇವರನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಸೆರೆಯಾಳಾಗಿ ಬಾಬಿಲೋನಿಗೆ ಕರೆದೊಯ್ದನು. ನೆಬೂಕದ್ನೆಚ್ಚರನು ರಾಜನ ತಾಯಿಯನ್ನು, ಅವನ ಪತ್ನಿಯರನ್ನು, ಅಧಿಕಾರಿಗಳನ್ನು ಮತ್ತು ದೇಶದ ಪ್ರತಿಷ್ಠಿತರನ್ನು ಕರೆದೊಯ್ದನು. ನೆಬೂಕದ್ನೆಚ್ಚರನು ಅವರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳನ್ನಾಗಿ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದನು. ಅರಸನ ತಾಯಿಯನ್ನೂ, ಅರಸನ ಹೆಂಡತಿಯರನ್ನೂ, ಅವನ ಅಧಿಕಾರಿಗಳನ್ನೂ, ದೇಶದ ಪ್ರತಿಷ್ಠಿತರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:15
18 ತಿಳಿವುಗಳ ಹೋಲಿಕೆ  

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದರಾಜನಾದ ಯೆಹೋಯಾಕೀನನೊಡನೆ ಸೆರೆಯೊಯ್ಯಲ್ಪಟ್ಟವರಲ್ಲಿ ಇವನೊಬ್ಬನು.


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಬೆಲೆಯುಳ್ಳಸಾಮಾನುಗಳನ್ನೂ ಬಾಬೆಲಿಗೆ ತರಿಸಿಕೊಂಡು ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದದ ಮತ್ತು ಯೆರೂಸಲೇವಿುನ ಮೇಲೆ ಅರಸನನ್ನಾಗಿ ಮಾಡಿದನು.


ದ್ರೋಹಿವಂಶದವರಾದ ಈ ಜನರಿಗೆ ಹೀಗೆ ಹೇಳು - ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇವಿುಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬೆಲಿಗೆ ಒಯ್ದುಕೊಂಡು ಹೋದನು;


ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಮೂರು ತಿಂಗಳು ಆಳಿದನು. ಯೆರೂಸಲೇವಿುನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆಯು ಇವನ ತಾಯಿ.


ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರುಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರುಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.


ರಾಜನಿಗೂ ರಾಜಮಾತೆಗೂ - ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ ಎಂದು ಹೇಳಿರಿ.


ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದಿದ್ದ ಸಕಲಜನರಿಗೂ


ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿ


ಅವು ಅದನ್ನು ಸರಪಣಿಗಳಿಂದ ಬಿಗಿದು ಪಂಜರದಲ್ಲಿ ಹಾಕಿ ಬಾಬೆಲಿನ ಅರಸನ ಬಳಿಗೆ ತಂದವು. ಅದರ ಧ್ವನಿಯು ಇಸ್ರಾಯೇಲಿನ ಪರ್ವತಗಳಲ್ಲಿ ಇನ್ನು ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿಬಿಟ್ಟವು.


ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯನಾದ ಅಶ್ಪೆನಜನಿಗೆ - ನೀನು ಇಸ್ರಾಯೇಲ್ಯರಲ್ಲಿ ಅಂದರೆ ರಾಜವಂಶೀಯರಲ್ಲಿ ಮತ್ತು ಪ್ರಧಾನರಲ್ಲಿ


ಬಾಬೆಲಿನ ಅರಸರು ಬಂದು ನೀನು ಪಡೆದ ಮಕ್ಕಳನ್ನು ತೆಗೆದುಕೊಂಡುಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇವಿುಸಿಕೊಳ್ಳುವರು ಅನ್ನುತ್ತಾನೆ ಎಂದು ಹೇಳಿದನು.


ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ವ್ಯವಸಾಯಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.


ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.


ಎಲ್ಲಾ ಇಸ್ರಾಯೇಲ್ಯರು ವಂಶಾವಳಿಗಳಲ್ಲಿ ಲಿಖಿತರಾದರು; ಅವರ ಹೆಸರುಗಳು ಇಸ್ರಾಯೇಲ್ಯರ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ. ಯೆಹೂದ್ಯರು ದೇವದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.


ಶೂಷನ್ ಕೋಟೆಯಲ್ಲಿ ಮೊರ್ದೆಕೈ ಎಂಬೊಬ್ಬ ಯೆಹೂದಿ ಮನುಷ್ಯನು ವಾಸಿಸುತ್ತಿದ್ದನು. ಇವನು ಬೆನ್ಯಾಮೀನ್‍ಕುಲದ ಕೀಷನ ಮರಿಮಗನೂ ಶಿಮ್ಗೀಯ ಮೊಮ್ಮಗನೂ ಯಾಯೀರನ ಮಗನೂ ಆಗಿದ್ದನು.


ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ - ಅವನು ತನ್ನ ಆಳಿಕೆಯ ಏಳನೆಯ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಮಂದಿ ಯೆಹೂದ್ಯರನ್ನು ಸೆರೆಯೊಯ್ದನು;


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಗಲವಾದ ಮತ್ತು ಉದ್ದವಾದ ರೆಕ್ಕೆಗಳುಳ್ಳ ತುಪ್ಪಳ ತುಂಬಿದ ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು