Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:10 - ಕನ್ನಡ ಸತ್ಯವೇದವು J.V. (BSI)

10 ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇವಿುನ ಸುತ್ತುಗೋಡೆಗಳನ್ನು ಕೆಡವಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತುಗೋಡೆಗಳನ್ನೆಲ್ಲ ಕೆಡವಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಂತರ ನೆಬೂಜರದಾನನೊಂದಿಗಿದ್ದ ಬಾಬಿಲೋನ್ ಸೈನ್ಯವು ಜೆರುಸಲೇಮಿನ ಸುತ್ತಲೂ ಇದ್ದ ಗೋಡೆಯನ್ನು ಕೆಡವಿಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:10
9 ತಿಳಿವುಗಳ ಹೋಲಿಕೆ  

ಅವರು ನನಗೆ - ಸೆರೆಯವರೊಳಗೆ ತಪ್ಪಿಸಿಕೊಂಡು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇವಿುನ ಪೌಳಿಗೋಡೆಯು ಕೆಡವಲ್ಪಟ್ಟಿರುತ್ತದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ ಎಂದು ಹೇಳಿದರು.


ಮತ್ತು ಕಸ್ದೀಯರು ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಯೆರೂಸಲೇವಿುನ ಸುತ್ತಣ ಗೋಡೆಗಳನ್ನು ಕೆಡವಿದರು.


ಚೀಯೋನೆಂಬ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ; ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.


ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇವಿುಗೆ ಕರಕೊಂಡುಬಂದು ಎಫ್ರಾಯೀಮ್ ಬಾಗಲಿಗೂ ಮೂಲೆಯ ಬಾಗಲಿಗೂ ಮಧ್ಯದಲ್ಲಿದ್ದ ಯೆರೂಸಲೇವಿುನ ನಾನೂರು ಮೊಳ ಗೋಡೆಯನ್ನು ಕೆಡವಿಬಿಟ್ಟನು.


ದೇವರೇ, ಮ್ಲೇಚ್ಫರು ನಿನ್ನ ಸ್ವಾಸ್ತ್ಯವನ್ನು ಹೊಕ್ಕು ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳಾಗಿ ಮಾಡಿಬಿಟ್ಟರು.


ನಮ್ಮ ಎತ್ತುಗಳು ದೊಡ್ಡ ಹೇರುಗಳನ್ನು ಹೊತ್ತು ಬರುವವು. ವೈರಿಗಳು ಒಳಗೆ ನುಗ್ಗುವದಾಗಲಿ ನಮ್ಮವರನ್ನು ಒಯ್ಯುವದಾಗಲಿ ಇರುವದಿಲ್ಲ; ಬೀದಿಗಳಲ್ಲಿ ಗೋಳಾಟವು ಕೇಳಿಸುವದಿಲ್ಲ.


ನಾವು ಸೆರೆಯಾಗಿ ಹನ್ನೆರಡನೆಯ ವರುಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಯೆರೂಸಲೇವಿುನಿಂದ ಪಲಾಯನಮಾಡಿದವನೊಬ್ಬನು ನನ್ನ ಬಳಿಗೆ ಬಂದು - ಪಟ್ಟಣವು ಶತ್ರುವಶವಾಯಿತು ಎಂದು ಹೇಳಿದನು.


ಅವರು ನಿಮ್ಮ ದನಗಳನ್ನೂ ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ದನಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು