Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:13 - ಕನ್ನಡ ಸತ್ಯವೇದವು J.V. (BSI)

13 ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ ಪೀಠಗಳನ್ನೂ ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕಸ್ದೀಯರು ಯೆಹೋವನ ಆಲಯದಲ್ಲಿದ್ದ ತಾಮ್ರದ ಕಂಬಗಳನ್ನು, ಪೀಠಗಳನ್ನೂ, ಕಡಲಿನ ಆಕಾರದ ಪಾತ್ರೆಯನ್ನೂ ಒಡೆದು ಅವುಗಳ ತಾಮ್ರವನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಾಬಿಲೋನಿಯದವರು ಸರ್ವೇಶ್ವರನ ಆಲಯದಲ್ಲಿದ್ದ ಕಂಚಿನ ಕಂಬಗಳನ್ನೂ ಚಕ್ರದ ಬಂಡಿಗಳನ್ನೂ, ಕಡಲಿನ ಆಕಾರದ ಕಂಚಿನ ಪಾತ್ರೆಯನ್ನೂ ಒಡೆದು ಅವುಗಳ ಕಂಚನ್ನೆಲ್ಲ ಕೊಂಡೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಾಬಿಲೋನ್ ಸೈನಿಕರು ದೇವಾಲಯದಲ್ಲಿದ್ದ ತಾಮ್ರದ ಸ್ತಂಭಗಳನ್ನು ಚೂರುಚೂರು ಮಾಡಿದರು. ಅವರು ಯೆಹೋವನ ಆಲಯದಲ್ಲಿದ್ದ ತಾಮ್ರದ ದೊಡ್ಡ ತೊಟ್ಟಿಯನ್ನು ಮತ್ತು ತಾಮ್ರದ ಬಂಡಿಯನ್ನು ಚೂರುಚೂರಾಗಿ ಒಡೆದುಹಾಕಿದರು. ನಂತರ ಬಾಬಿಲೋನ್ ಸೈನಿಕರು ತಾಮ್ರದ ಚೂರುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರ ಆಲಯದಲ್ಲಿದ್ದ ಕಂಚಿನ ಸ್ತಂಭಗಳನ್ನೂ, ಪೀಠಗಳನ್ನೂ, ಕಂಚಿನ ಸಮುದ್ರವೆಂಬ ಪಾತ್ರೆಯನ್ನೂ ಬಾಬಿಲೋನಿಯರು ಒಡೆದುಹಾಕಿ, ಅದರ ಕಂಚನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:13
14 ತಿಳಿವುಗಳ ಹೋಲಿಕೆ  

ದೇವಾಲಯದ ಎಲ್ಲಾ ಚಿಕ್ಕ ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರ, ಅರಸನ ಮತ್ತು ಅವನ ಸರದಾರರ ಭಂಡಾರ ಇವುಗಳ ದ್ರವ್ಯವನ್ನೂ ಬಾಬೆಲಿಗೆ ಒಯ್ದನು.


ವಿರೋಧಿಯು ಕೈಚಾಚಿ ಅವಳ ಭೋಗ್ಯ ವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; ಮ್ಲೇಚ್ಫರು ನಿನ್ನ ಸಭೆಗೆ ಸೇರಬಾರದು ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವದನ್ನು ಆಕೆಯು ಕಾಣಬೇಕಾಯಿತು.


ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿನ ಬರುವದು; ಇಲ್ಲೇನೂ ಉಳಿಯುವದಿಲ್ಲ.


ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು.


ಅದರಲ್ಲಿರುವ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು; ಸಲಿಕೆಗಳನ್ನೂ ಬೋಗುಣಿಗಳನ್ನೂ ಮುಳ್ಳುಗಳನ್ನೂ ಅಗ್ಗಿಷ್ಟಿಗೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.


ಇದಲ್ಲದೆ ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ದ್ರವ್ಯವನ್ನು ತೆಗೆದುಕೊಂಡುಹೋದನು. ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.


ಇದಲ್ಲದೆ ದೇವಾಲಯದ ಮುಂದೆ ಎರಡು ಕಂಬಗಳನ್ನು ನಿಲ್ಲಿಸಿದನು. ಅವು ಮೂವತ್ತೈದು ಮೊಳ ಎತ್ತರವಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಿದ್ದವು.


ಆತನು - ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿನ ಬರುವದು; ಇಲ್ಲೇನೂ ಉಳಿಯುವದಿಲ್ಲ.


ಮತ್ತು ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬೆಲಿಗೆ ತೆಗೆದುಕೊಂಡು ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು