Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:16 - ಕನ್ನಡ ಸತ್ಯವೇದವು J.V. (BSI)

16 ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಡಲೆನಿಸಿಕೊಂಡ ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರವನ್ನು ಬಳಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ಕಡಲಿನ ಆಕಾರದ ಪಾತ್ರೆ, ಚಕ್ರದ ಬಂಡಿಗಳು ಇವುಗಳನ್ನು ಮಾಡುವುದಕ್ಕೆ ಎಷ್ಟೋ ಕಂಚು ಹಿಡಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವನು ತೆಗೆದುಕೊಂಡು ಹೋದ ವಸ್ತುಗಳ ಪಟ್ಟಿಯು ಹೀಗಿದೆ: ಎರಡು ತಾಮ್ರ ಕಂಬಗಳು, ಒಂದು ತೊಟ್ಟಿ ಮತ್ತು ದೇವಾಲಯಕ್ಕೆ ಸೊಲೊಮೋನನು ನಿರ್ಮಿಸಿದ್ದ ಬಂಡಿಗಳು. ಈ ವಸ್ತುಗಳ ತಾಮ್ರವು ತೂಕ ಮಾಡಲಾರದಷ್ಟು ಅಧಿಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸೊಲೊಮೋನನು ಯೆಹೋವ ದೇವರ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ಕಂಚಿನ ಸಮುದ್ರವೆಂಬ ಪಾತ್ರೆ, ಚಕ್ರದ ಬಂಡಿಗಳು, ಇವುಗಳನ್ನು ಮಾಡುವುದಕ್ಕೆ ತೂಕ ಮಾಡಲಾರದಷ್ಟು ಕಂಚು ಹಿಡಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:16
4 ತಿಳಿವುಗಳ ಹೋಲಿಕೆ  

ಸೊಲೊಮೋನನು ತಾನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದದರಿಂದ ಅವುಗಳ ತಾಮ್ರದ ತೂಕವು ಎಷ್ಟೆಂಬದನ್ನು ಗೊತ್ತು ಮಾಡಲಾರದವನಾದನು.


ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು.


ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಗೆ ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.


ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು